ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ವೀರರಾಣಿ ಅಬ್ಬಕ್ಕ ಪುರಸ್ಕಾರ ಪಡೆದ ಕೆ.ಬಿ.ಅಮ್ಮಣ್ಣಿ. 
ಕೊಡಗು

ಕೆ.ಬಿ.ಅಮ್ಮಣ್ಣಿ ವೀರರಾಣಿ ಅಬ್ಬಕ್ಕ ಪುರಸ್ಕಾರ

ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ತೋರ ಗ್ರಾಮದ ನಿವಾಸಿ ಕೆ.ಬಿ.ಅಮ್ಮಣ್ಣಿ ಅವರು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು ನಾಟಿವೈದ್ಯ, ಬಾಣಂತಿ ಆರೈಕೆ, ಜಾನಪದ ಕ್ಷೇತ್ರದಲ್ಲಿನ ಸೇವೆಯನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸ ಸರಣಿಯ 100ರ ಸಂಭ್ರಮ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶಸ್ತಿ ಪ್ರದಾನ ಮಾಡಿದರು.
ಕೆ.ಬಿ.ಅಮ್ಮಣ್ಣಿ ಕೆದಮುಳ್ಳೂರು ಪಂಚಾಯಿತಿಯ ತೋರ ಗ್ರಾಮದ ನಿವಾಸಿ ಭೀಮಯ್ಯ ಅವರ ಪತ್ನಿ.