ಚಿಕ್ಕಅಳುವಾರ ಗ್ರಾಮದಲ್ಲಿರುವ ಶ್ರೀ ಅಳುವಾರಮ್ಮ ದೇವಾಲಯ ಆವರಣದಲ್ಲಿ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆಯಲ್ಲಿ ಗ್ರಾಮ ಅರಣ್ಯ ಸಮಿತಿಯ ಸಭೆ ಆಯೋಜಿಸಲಾಗಿತ್ತು. ಸೋಮಶೇಖರ್, ಕಿರಣ್ ಜಿ.ಗೌರಯ್ಯ, ಹೊನ್ನೇಗೌಡ, ವಿ.ಪಿ.ಶಶಿಧರ್ ಇದ್ದರು. 
ಕೊಡಗು

ಮಾನದಂಡ ಸಡಿಲಿಸಿ ರೈತರಿಗೆ ಹಕ್ಕು ಪತ್ರ ನೀಡಿ

ಪ್ರಮುಖ ಮುಖ್ಯಾಂಶಗಳು

  • ತೊರೆನೂರು ಗ್ರಾಮ ಪಂಚಾಯಿತಿ
  • ಚಿಕ್ಕಅಳುವಾರ ಗ್ರಾಮ
  • ಶ್ರೀ ಅಳುವಾರಮ್ಮ ದೇವಾಲಯ ಆವರಣ
  • ಡಾ.ಮಂತರ್‌ಗೌಡ ಅಧ್ಯಕ್ಷತೆ
ಕುಶಾಲನಗರ: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿರುವ ಶ್ರೀ ಅಳುವಾರಮ್ಮ ದೇವಾಲಯ ಆವರಣದಲ್ಲಿ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಅರಣ್ಯ ಸಮಿತಿಯ ಸಭೆ ಆಯೋಜಿಸಲಾಗಿತ್ತು.
ಅಳುವಾರ ಗ್ರಾಮದಲ್ಲಿರುವ ಊರು ಉಡುವೆ ಪೈಸಾರಿ ಸರ್ವೇ ನಂ. 1/ 1 ರಲ್ಲಿ ಸುಮಾರು 75 ಕೃಷಿ ಕುಟುಂಬ ಬೇಸಾಯ ಮಾಡಿ ಜೀವನವನ್ನು ಸಾಗಿಸುತ್ತಿರುವ ಬಗ್ಗೆ ಶಾಸಕ ಮಂತರ್‌ಗೌಡ ಮಾಹಿತಿ ಪಡೆದುಕೊಂಡರಲ್ಲದೆ, ಆ ಕುಟುಂಬಗಳಿಗೆ ಇನ್ನೂ ಹಕ್ಕುಪತ್ರ ನೀಡದಿರುವ ಬಗ್ಗೆ ಪ್ರಸ್ತಾಪಿಸಿದರು. ಅರಣ್ಯ ಇಲಾಖೆಯ ಮಾನದಂಡಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಿಸಿ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಶಾಸಕ ಡಾ.ಮಂತರ್‌ಗೌಡ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸೋಮಶೇಖರ್ ಮಾತನಾಡಿ, ಈಗಾಗಲೇ ಈ ಕುಟುಂಬಗಳ ಬಗ್ಗೆ ಎಲ್ಲ ಮಾಹಿತಿಯನ್ನು ಪಡೆಯಲಾಗಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ನಿಯಮಾನುಸಾರ ಹಕ್ಕುಪತ್ರ ನೀಡಲಾಗುವುದು ಎಂದು ಭರವಸೆ ನೀಡಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ .ಶಶಿಧರ್ ಮಾತನಾಡಿ, ರೈತರು ಅನೇಕ ವರ್ಷಗಳಿಂದ ಅನುಭವಿಸುತ್ತಿರುವ ಹಕ್ಕು ಸಮಸ್ಯೆಗಳ ಕುರಿತ ಸಮಗ್ರ ಮಾಹಿತಿಯನ್ನು ಸಭೆಯಲ್ಲಿ ಮಂಡಿಸಿದರು.
ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ , ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹೊನ್ನೇಗೌಡ, ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಂಜುಂಡಪ್ಪ, ಅಭಿವೃದ್ಧಿ ಅಧಿಕಾರಿ ಶ್ಯಾಮ್, ಗ್ರಾಮದ ಪ್ರಮುಖರಾದ ಕೆ . ಎಸ್.ಕೃಷ್ಣೇಗೌಡ, ಟಿ.ಕೆ.ಪಾಂಡುರಂಗ, ಪ್ರೇಮ್‌ಕುಮಾರ್, ರಮೇಶ್, ಮೂರ್ತಿ ಇತರರಿದ್ದರು.