ಅಯ್ಯಂಗೇರಿಯ ಶ್ರೀಕೃಷ್ಣ ಚಿನ್ನತಪ್ಪ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಆಯೋಜಿಸಲಾದ ಶ್ರೀ ಕೃಷ್ಣ ಹಾಗೂ ರಾಧೆಯ ಚದ್ಮ ವೇಷಧಾರಿ ಮಕ್ಕಳು.
ನಾಪೋಕ್ಲು: ಇತಿಹಾಸ ಪ್ರಸಿದ್ಧ ಅಯ್ಯಂಗೇರಿಯ ಶ್ರೀ ಕೃಷ್ಣ ಚಿನ್ನತಪ್ಪ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ಶ್ರೀ ಕೃಷ್ಣನಿಗೆ ಕ್ಷೀರಾಭಿಷೇಕ ಮತ್ತು ವಿಶೇಷ ಪೂಜೆ ಕೈಂಕರ್ಯ ಜರುಗಿದವು. ಭಾಗಮಂಡಲದ ಪುರೋಹಿತ ಗೌರಿಶಂಕರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನೆರವೇರಿದವು. ಬಳಿಕ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ಮತ್ತು ಉಪಾಹಾರ ವಿತರಿಸಲಾಯಿತು. ಶ್ರೀ ಕೃಷ್ಣ ಹಾಗೂ ರಾಧೆಯ ಛದ್ಮವೇಶ ಸ್ಪರ್ಧೆ ಏರ್ಪಡಿಸಲಾಗಿತ್ತು. ಭಾಗವಹಿಸಿದ್ದ ಎಲ್ಲ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಚಿನ್ನತಪ್ಪ ದೇವಸ್ಥಾನದ ದೇವತಕ್ಕರು ಮತ್ತು ಆಡಳಿತ ಮಂಡಳಿ ಅಧ್ಯಕ್ಷರಾದ ಬಿದ್ದಿಯಂಡ್ಡ ಸುಭಾಶ್ ಇತರರು ಇದ್ದರು.