ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಸಮಸ್ಯೆ ಒಡ್ಡುತ್ತಿರುವ ಲಾರಿಗಳು.
ವಿರಾಜಪೇಟೆ: ತಾಲೂಕಿನ ಆರ್ಜಿ ಗ್ರಾಮದ ರಸ್ತೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪರ್‌ಗಳು ಅತಿಯಾದ ವೇಗದಲ್ಲಿ ಸಂಚರಿಸುತ್ತಿವೆ. ಇದನ್ನು ಪ್ರಶ್ನೆ ಮಾಡಿದರೆ ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸುತ್ತಾರೆ. ಆರ್ಜಿ ಗ್ರಾಮ ಕೇರಳಂಗೆ ಹೊಂದಿಕೊಂಡಿರುವುದರಿಂದ ಇಲ್ಲಿ ಕೇರಳಂ ನೋಂದಣಿಯ ವಾಹನಗಳ ಓಡಾಟ ಹೆಚ್ಚಾಗಿದೆ. ವಿದ್ಯಾರ್ಥಿಗಳು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಈ ರಸ್ತೆಯಲ್ಲಿ ಲಾರಿ, ಟಿಪ್ಪರ್‌ಗಳ ಅತಿಯಾದ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಅವಘಡ ಸಂಭವಿಸುವುದಕ್ಕೂ ಮುನ್ನ ವಿರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣೆ ಪೊಲೀಸರು, ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.