ಮೃತ ಅನಿಲ್ 
ಕೊಡಗು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಸುಂಟಿಕೊಪ್ಪ: ಸಮೀಪದ ಕೆಂಚಟ್ಟಿಯ ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿದ್ದಾನೆ.
ಬೈಕ್ ಸವಾರ ಮಾದಾಪುರ ಜಂಬೂರು ನಿವಾಸಿ ಅನಿಲ್‌ಕುಮಾರ್ (36) ಮೃತ. ಹಿಂಬದಿ ಸವಾರ ಗರಗಂದೂರು ಗ್ರಾಮದ ದಿನೇಶ್ ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಂಟಿಕೊಪ್ಪದಿಂದ ಮಾದಾಪುರ ಕಡೆಗೆ ತೆರಳುತ್ತಿದ್ದಾಗ ಇವರಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಕೆಂಚಟ್ಟಿಯ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಅನಿಲ್‌ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.