ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನಿರ್ದೇಶನದ ಹಿನ್ನೆಲೆಯಲ್ಲಿ ಕಾಲೂರು - ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. 
ಕೊಡಗು

ರಸ್ತೆ ದುರಸ್ತಿ ಕಾರ್ಯ ಆರಂಭ

ಸುನಿಲ್ ಪೊನ್ನೇಟಿ
ಮಡಿಕೇರಿ:
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನಿರ್ದೇಶನದ ಹಿನ್ನೆಲೆಯಲ್ಲಿ ಕಾಲೂರು - ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ಆರಂಭವಾಗಿದೆ.
ರಸ್ತೆ ಹಾಳಾಗಿರುವುದರಿಂದ ಬಸ್ ಸಂಚಾರವಿಲ್ಲದೆ ವಿಧ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ವಾರದ ಹಿಂದೆ ಕಾಲೂರು ಗ್ರಾಮಸ್ಥರು ಡಾ. ಮಂತರ್ ಗೌಡ ಅವÀರಲ್ಲಿ ರಸ್ತೆ ದುರಸ್ತಿಗೆ ಮನವಿ ಮಾಡಿಕೊಂಡಿದ್ದರು. ಮಳೆ ಆರಂಭಗೊAಡಿರುವುದರಿAದ ಪೂರ್ಣ ಪ್ರಮಾಣದಲ್ಲಿ ರಸ್ತೆ ನಿರ್ಮಾಣ ಅಸಾಧ್ಯವಾಗಿದ್ದು ಸದ್ಯಕ್ಕೆ ತಾತ್ಕಾಲಿಕ ದುರಸ್ತಿ ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ಶಾಸಕರು ಈ ಸಂದರ್ಭ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಈಗ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಸ್ಥಳದಲ್ಲಿಯೇ ಇದ್ದು ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.