ಸೋಮವಾರಪೇಟೆ ರೋಟರಿ ಕ್ಲಬ್ ವತಿಯಿಂದ ನೇತ್ರ ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿತ್ತು. ವೀಣಾ, ರಮೇಶ್, ಸುಂದರ್ ಇದ್ದರು.
ಸೋಮವಾರಪೇಟೆ: ಇಲ್ಲಿನ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ವತಿಯಿಂದ ಪಟ್ಟಣದ ರೋಟರಿ ಭವನದಲ್ಲಿ ಆರೋಗ್ಯ ಹಾಗೂ ನೇತ್ರ ತಪಾಸಣಾ ಉಚಿತ ಶಿಬಿರ ಈಚೆಗೆ ಆಯೋಜನೆಗೊಂಡಿತ್ತು.
ಕಾರ್ಯಕ್ರಮವನ್ನು ರೋಟರಿ ಅಧ್ಯಕ್ಷೆ ವೀಣಾ ಮನೋಹರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದ ಬಗ್ಗೆ ಕಾಳಜಿ ವಹಿಸುವುದು ರೋಟರಿ ಸಂಸ್ಥೆಯ ಪ್ರಮುಖ ಧ್ಯೇಯಗಳಲ್ಲಿ ಒಂದಾಗಿದೆ. ಜನರಿಗೆ ಆರೋಗ್ಯ ಸೇವೆ ಸುಲಭವಾಗಿ ದೊರೆಯಲು ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಜನರು ತಮ್ಮ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ, ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಮುಂದಿನ ದಿನಗಳಲ್ಲಿಯೂ ಜನೋಪಯೋಗಿ ಸೇವಾ ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ನಿರಂತರವಾಗಿ ಆಯೋಜಿಸಲಿದೆ ಎಂದು ಹೇಳಿದರು.
ಶಿಬಿರದಲ್ಲಿ ಸುಮಾರು 110ಕ್ಕೂ ಅಧಿಕ ಜನರಿಗೆ ನೇತ್ರ, ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಪರೀಕ್ಷೆಗಳನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಡಿ.ಪಿ. ರಮೇಶ್, ನಿಯೋಜಿತ ಅಧ್ಯಕ್ಷ ಬಿ.ಎಸ್. ಸುಂದರ್, ರೋಟರಿ ಮಾಜಿ ಉಪ ಪ್ರಾಂತಪಾಲ ಪಿ.ಕೆ. ರವಿ, ಚಾರ್ಟರ್ ಅಧ್ಯಕ್ಷ ಎಚ್.ಸಿ. ನಾಗೇಶ್, ಉದ್ಯಮಿ ಜಿ.ಡಿ. ನವೀನ್ ಮತ್ತಿತರರು ಇದ್ದರು.