ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರೇ.ಫಾ.ಎಡ್ವರ್ಡ್ ವಿಲಿಯಂ ಸಲ್ಡಾನಾ ಹಾಗೂ ಇತರರು ಧ್ವಜಾರೋಹಣ ನೇರವೇರಿಸಿದರು.
ಸುಂಟಿಕೊಪ್ಪ: ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವಕ್ಕೆ ಗುರುವಾರ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಅವರು ಧ್ವಜಾರೋಹಣ ನೇರವೇರಿಸುವ ಮೂಲಕ ವಾರ್ಷಿಕೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.
ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮೇ 10 ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಗುರುವಾರ ಸಂಜೆ 5.30ಕ್ಕೆ ದೇವಾಲಯದ ಆವರಣದಲ್ಲಿ ಧ್ವಜಾರೋಹಣದ ಮೂಲಕ ಬಲಿಪೂಜೆ ನಡೆಯಿತು. ಮಡಿಕೇರಿ ವಲಯ ಧರ್ಮಗುರು ಮತ್ತು ಸಂತ ಮೈಕಲರ ದೇವಾಲಯದ ಧರ್ಮಗುರು ಜಾರ್ಜ್ ದೀಪಕ್, ಬೆಂಗಳೂರಿನ ಧರ್ಮಗುರು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರು ವಿಜಯಕುಮಾರ್ ಸಾನ್ನಿಧ್ಯ ವಹಿಸಿದ್ದರು.
ಶುಕ್ರವಾರ ಸಂಜೆ 5.30ಕ್ಕೆ ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರು ಟಿ.ಪೌಲೂಸ್ ಸಾನ್ನಿಧ್ಯದಲ್ಲಿ ನೇರವೇರಲಿದೆ.