ಸೋಮವಾರಪೇಟೆ ತಾಲೂಕು ಐಗೂರು ಗ್ರಾಮದಲ್ಲಿ ನಡೆಯಲಿರುವ ಸೋಮವಾರಪೇಟೆ ತಾಲೂಕು 9ನೇ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತು ವಿವಿಧ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಕಾರ್ಯದರ್ಶಿ ಜ್ಯೋತಿ ಅರುಣ್, ಖಜಾಂಚಿ ಕೆ.ಪಿ.ದಿನೇಶ್ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು ಇದ್ದರು.  
ಕೊಡಗು

ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಿ

ಸೋಮವಾರಪೇಟೆ: ಐಗೂರು ಗ್ರಾಮದಲ್ಲಿ ಫೆ. 9ರಂದು ಆಯೋಜಿಸಿರುವ ಸೋಮವಾರಪೇಟೆ ತಾಲೂಕು 9ನೇ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್ ಹೇಳಿದರು. ಅಗತ್ಯ ಸಿದ್ಧತೆಗಳ ಕುರಿತು ವಿವಿಧ ಸಮಿತಿಯ ಪದಾಧಿಕಾರಿಗಳೊಂದಿಗೆ ಐಗೂರಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಸಮ್ಮೇಳನದ ಅಧ್ಯಕ್ಷರ ಆಯ್ಕೆ, ಹೋಬಳಿ ಮಟ್ಟದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕುರಿತು ಸದಸ್ಯರು ಸಲಹೆ, ಸೂಚನೆ ನೀಡಿದರು. ಸ್ಮರಣ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಹಣಕಾಸು ಸಮಿತಿ ಅಧ್ಯಕ್ಷ ಕೆ.ಪಿ.ರಾಯ್ ಅವರಿಗೆ ರಸೀದಿ ಪುಸ್ತಕಗಳನ್ನು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್ ಹಸ್ತಾಂತರಿಸಿದರು. ಕಾರ್ಯದರ್ಶಿ ಜ್ಯೋತಿ ಅರುಣ್, ಖಜಾಂಚಿ ಕೆ.ಪಿ.ದಿನೇಶ್ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.