ಶನಿವಾರಸಂತೆ ಗ್ರಾಪಂ ನೂತನ ಕಟ್ಟಡವನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ಗೀತಾ ಹರೀಶ್ ಇದ್ದರು. 
ಕೊಡಗು

ಪಂಚಾಯಿತಿಯ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಿ

ಶನಿವಾರಸಂತೆ: ಗ್ರಾಮ ಪಂಚಾಯಿತಿ ಸರ್ವಾಂಗೀಣ ಅಭಿವೃದ್ಧಿ ಜತೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು.
ಶನಿವಾರಸಂತೆ ಗ್ರಾಪಂ ವತಿಯಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಿರ್ಮಿಸಿರುವ ಭಾರತ್ ನಿರ್ಮಾಣ್ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಿರುವ ವಾಲಿಬಾಲ್ ಅಂಕಣ ಉದ್ಘಾಟಿಸಿ ಮಾತನಾಡಿದರು. ಗ್ರಾಪಂಗಳು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಪಂ ಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ರಹಿತವಾಗಿ ಕೈಜೋಡಿಸಬೇಕು ಎಂದ ಅವರು, ಗ್ರಾಪಂನಿಂದ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಶಾಲೆಯ ಆವರಣದಲ್ಲಿ ವಾಲಿಬಾಲ್ ಅಂಕಣವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಗ್ರಾಪಂ ಅಧ್ಯಕ್ಷೆ ಗೀತಾ ಹರೀಶ್, ಉಪಾಧ್ಯಕ್ಷ ಸರ್ದಾರ್ ಅಹಮದ್, ಸದಸ್ಯರಾದ ಎಸ್.ಸಿ.ಶರತ್ ಶೇಖರ್, ಆದಿತ್ಯ ಗೌಡ, ಫರ್ಜನಾ ಬಾನು, ಸರಸ್ವತಿ, ಸರೋಜ ಶೇಖರ್, ಕಾವೇರಿ, ಎಸ್.ಆರ್.ಮಧು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಹರೀಶ್ ಹಾಜರಿದ್ದರು.
ಬಳಿಕ ಶಾಸಕ ಡಾ.ಮಂತರ್‌ಗೌಡ ದುಂಡಳ್ಳಿ ಗ್ರಾಪಂನ ಗ್ರಂಥಾಲಯ ಮತ್ತು ಡಿಜಿಟಲ್ ಮಾಹಿತಿ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಿರುವ ಓದುಗರ ಕೊಠಡಿ ಉದ್ಘಾಟಿಸಿದರು.