ಸಂಜೀವಿನಿ ಸಭಾಂಗಣ ಫೆ.10 ರಂದು ಉದ್ಬಾಟನೆ
- ಬ್ಯಾಡಗೊಟ್ಟ ಪಂಚಾಯಿತಿ
- ನೂತನವಾಗಿ ನಿರ್ಮಾಣವಾಗಿರುವ
ಶನಿವಾರಸಂತೆ: ಸಮೀಪದ ಬ್ಯಾಡಗೊಟ್ಟ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸಂಜೀವಿನಿ ಸಭಾಂಗಣ ಫೆ.10 ರಂದು ಉದ್ಬಾಟನೆಯಾಗಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಎಸ್.ಹರೀಶ್ ತಿಳಿಸಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪಂಚಾಯಿತಿ ಕಚೇರಿಯ ಮೊದಲ ಅಂತಸ್ತಿನಲ್ಲಿ ಕಟ್ಟಡ ನಿರ್ಮಿಸಲಾಗಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮುಂತಾದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.