ನಾಪೋಕ್ಲು ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಬೀರೇಶ್ ವಿದ್ಯಾರ್ಥಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಿವೈಪಿಸಿ ಸೌಮ್ಯ ಪೊನ್ನಪ್ಪ, ಬಿಆರ್‌ಸಿ ಶರ್ಮಿಳಾ ಪ್ರಶಸ್ತಿಪತ್ರ ವಿತರಿಸಿದರು.
ನಾಪೋಕ್ಲು: ಇಲ್ಲಿನ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಬೀರೇಶ್ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಮಿಮಿಕ್ರಿ ಸ್ಪರ್ಧೆಯಲ್ಲಿ ಇಲ್ಲಿನ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಬೀರೇಶ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟ ಸ್ಪರ್ಧೆಗೆ ಸ್ಥಾನ ಪಡೆದುಕೊಂಡಿದ್ದಾನೆ. ಈ ವಿದ್ಯಾರ್ಥಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಿವೈಪಿಸಿ ಸೌಮ್ಯಾ, ಪೊನ್ನಪ್ಪ, ಬಿಆರ್‌ಸಿ ಶರ್ಮಿಳಾ ಪ್ರಶಸ್ತಿ ಪತ್ರ ವಿತರಿಸಿ, ಅಭಿನಂದಿಸಿದ್ದಾರೆ.