ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಚಿಹ್ನೆ 
ಕೊಡಗು

15ರಂದು ಅರೆಭಾಷೆ ದಿನಾಚರಣೆ

ಲಲಾಟಾಕ್ಷ ಎಸ್
ನಾಪೋಕ್ಲು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಡಿ.15ರಂದು ಮೂರ್ನಾಡಿನ ಗೌಡ ಸಮಾಜದಲ್ಲಿ ಅರೆ ಭಾಷೆ ದಿನಾಚರಣೆ ಆಯೋಜಿಸಲಾಗಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಕಾರ್ಯಕ್ರಮ ಉದ್ಘಾಟಿಸುವರು. ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ.ಕಾರ್ಯಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ಥಲೆ ಸೋಮಣ್ಣ ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ನಮ್ಮ ಹಿರಿಯರ ಕೊಡುಗೆ ವಿಷಯ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಡಿ ಯನ್ ಅಪ್ಪಯ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಸಮಾಜಗಳ ಪಾತ್ರ ವಿಷಯ ಕುರಿತು ವಿಷಯ ಮಂಡಿಸುವರು. ಹಿರಿಯರು, ಮಕ್ಕಳಿಗೆ ಪ್ರತ್ಯೇಕವಾಗಿ ಅರೆ ಭಾಷೆ ರಸಪ್ರಶ್ನೆ ಸ್ಪರ್ಧೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವಿದೆ ಎಂದು ಅಕಾಡೆಮಿ ಸಂಚಾಲಕ ಸೂದನ ಎಸ್.ಈರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.