ಗದ್ದೆಹಳ್ಳದ ವಂದನಾಬಾರ್ ತಿರುವಿನಲ್ಲಿ ಸರಣಿ ಅಪಘಾತಗೊಂಡಿರುವುದು.
- ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಸುಂಟಿಕೊಪ್ಪ: ಸಮೀಪದ ಗದ್ದೆಹಳ್ಳದ ಬಳಿ 2 ಇನೋವಾ ಕಾರು ಹಾಗೂ ಟೆಂಪೋ ನಡುವೆ ಶನಿವಾರ ಸರಣಿ ಅಪಘಾತ ಸಂಭವಿಸಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗದ್ದೆಹಳ್ಳದ ವಂದನಾಬಾರ್ ತಿರುವಿನಲ್ಲಿ ಬೆಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೋ, ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ಆಗಮಿಸುತ್ತಿದ್ದ ಇನೋವಾ ವಾಹನ ಹಾಗೂ ಮೈಸೂರಿನಿಂದ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದ ಇನೋವಾ ಕಾರು ನಡುವೆ ಡಿಕ್ಕಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಕ್ ಹೆದ್ದಾರಿ ಬದಿಯಲ್ಲಿ ಮಗಚಿಕೊಂಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಸಂಖ್ಯೆಯಲ್ಲಿ ವಾಹನಗಳ ದಟ್ಟಣೆಯಿಂದ ಸಂಚಾರಕ್ಕೆ ತೊಡಕು ಉಂಟಾಗಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಟೆಂಪೋ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.