ಶನಿವಾರಸಂತೆ: ವೀರಶೈವ ಲಿಂಗಾಯತ ಮಹಾಸಭಾ ಮತ್ತು ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಯುವ ಘಟಕದ ವತಿಯಿಂದ ಜೂ.13ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ ಬಸವೇಶ್ವರ ಜಯಂತಿ, ಡಾ.ಶಿವಕುಮಾರ ಸ್ವಾಮೀಜಿ ಅವರ ಜಯಂತಿ, ರೇಣುಕಾಚಾರ್ಯರ ಜಯಂತಿ ಹಾಗೂ ಕೊಡಗು ರಾಜರ ಸಂಸ್ಮರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀಸದಾಶಿವ ಸ್ವಾಮೀಜಿ ತಿಳಿಸಿದರು.
ಸಮಾರಂಭದಲ್ಲಿ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು, ವೀರಶೈವ ಸಮಾಜದ ರಾಷ್ಟ್ರಾಧ್ಯಕ್ಷ ಈಶ್ವರ ಖಂಡ್ರೆ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉದ್ಘಾಟಿಸಲಿದ್ದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಯುವ ಘಟಕ ಈ ಸಮಾರಂಭವನ್ನು ಆಯೋಜಿಸಿದ್ದು, ಕೊಡಗು ಜಿಲ್ಲಾ ವೀರಶೈವ ಲಿಂಗಾಯಿತ ಮಹಾಸಭಾ ಸೇರಿದಂತೆ ಸಮಾಜದ ಎಲ್ಲ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕೊಡಗು ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಮತ್ತು ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಶ್ರೀಮಹಂತ ಶಿವಲಿಂಗ ಸ್ವಾಮೀಜಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಕಲ್ಲಳ್ಳಿ ಮಠದ ಶ್ರೀರುದ್ರಮುನಿ ಸ್ವಾಮೀಜಿ, ವೀರಶೈವ ಮಹಾಸಭಾ ಯುವ ಘಟಕದ ಕೊಡಗು ಜಿಲ್ಲಾಧ್ಯಕ್ಷ ಮೋಕ್ಷಿಕ್ ರಾಜ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿತಿನ್, ಕಾರ್ಯದರ್ಶಿಗಳಾದ ಶಿವಾನಂದ್, ಸೋಹನ್, ಖಜಾಂಚಿ ಭರತ್, ಕಿರಣ್ ಹಾಜರಿದ್ದರು.