ಬೈರಂಬಾಡದಲ್ಲಿ ಷಷ್ಠಿ ಉತ್ಸವದಲ್ಲಿ ಪಾಲ್ಗೊಂಡ ಭಕ್ತ ಸಮೂಹ.
- ಪ್ರಧಾನ ಅರ್ಚಕ ಗೋಪಾಲಕೃಷ್ಣ ನೇತೃತ್ವದಲ್ಲಿ ಪೂಜಾ ಕೈಂಕರ್ಯ
ಸಿದ್ದಾಪುರ: ಇತಿಹಾಸ ಪ್ರಸಿದ್ಧ ಬೈರಂಬಾಡದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಷಷ್ಠಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಪ್ರಧಾನ ಅರ್ಚಕ ಗೋಪಾಲಕೃಷ್ಣ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.
ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರ, ಮೂರ್ನಾಡು, ನಾಪೋಕು, ವಿರಾಜಪೇಟೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತರು ವಿಶೇಷ ಪೂಜೆ ಸಲ್ಲಿಸಿ ತೀರ್ಥಪ್ರಸಾದ ಸ್ವೀಕರಿಸಿದರು. ಭಕ್ತರಿಗೆ ಅನ್ನಸಂಪತರ್ಪಣೆ ಆಯೋಜಿಸಲಾಗಿತ್ತು. ದೇವಸ್ಥಾನ ಸಮಿತಿ ಪ್ರಮುಖರಾದ ಬೆಳ್ಳಿಯಪ್ಪ, ಅಯ್ಯಪ್ಪ, ಕರುಂಬಯ್ಯ, ಮುತ್ತಣ್ಣ, ಮಾದಪ್ಪ, ಪೆಮ್ಮಯ್ಯ, ಸುಬ್ರಹ್ಮಣಿ, ಮುತ್ತಯ್ಯ, ಮಾದಪ್ಪ, ಸಮಿತಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.