ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಶ್ರಮದಾನದ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. 
ಕೊಡಗು

ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಪರಿಸರ ದಿನಾಚರಣೆ

ನಾಪೋಕ್ಲು: ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ತಂಡ ಶ್ರಮದಾನದ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇಲ್ಲಿಯ ಚೆರಿಯಪರಂಬು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಣ್ಣಿನ ಗಿಡಗಳನ್ನು ನೆಟ್ಟು, ಶ್ರಮದಾನ ಮಾಡಿದರು. ಬಳಿಕ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಉಮಾಲಕ್ಷ್ಮೀ, ರಮ್ಯಾ, ಶಂಕರ, ದಿಲೀಶ್, ಮಾಯಿಲಪ್ಪ, ಶರವಣ, ಆನಂದ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.