ಬೋಯಿಕೇರಿ ಗ್ರಾಮದಲ್ಲಿ ಬಸ್ ತಂಗುದಾಣವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ರಂಜಿ ಪೂಣಚ್ಚ, ನಯನಾ ಜಗತ್, ಕಾಳಮಾಡ ಬೇಬಿ, ಮತೀನ್, ಜಗತ್ ಇತರರು ಹಾಜರಿದ್ದರು.
ವಿರಾಜಪೇಟೆ : ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಪಾಲನೆ ಬಗ್ಗೆ ಜನರೇ ಗಮನಹರಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಪುರಸಭೆ ವ್ಯಾಪ್ತಿಯ ಕೆ. ಬೋಯಿಕೇರಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ತಂಗುದಾಣವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ ಕಾಮಗಾರಿ ಮುಗಿದಿದ್ದು, ಸೇವೆಗೆ ಸಮರ್ಪಣೆ ಮಾಡಲಾಗಿದೆ.
ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇದರ ಸ್ವಚ್ಛತೆಯನ್ನು ಜನರೇ
ನಿರ್ವಹಣೆ ಮಾಡಿಕೊಳ್ಳಬೇಕು ಎಂದರು.
ಅಭಿವೃದ್ಧಿ ಕಾಮಗಾರಿ ಎನ್ನುವುದು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಕಳೆದ ಎರಡು
ವರ್ಷಗಳಿಂದಲೂ ಸರ್ಕಾರದ ಅನುದಾನದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ.
ಇನ್ನಷ್ಟು ನಡೆಯಲಿದೆ ಎಂದು ಪೊನ್ನಣ್ಣ ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಧಿಕಾರಿ ಪಿ. ಕೆ ನಾಚಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ನಯನಾ ಜಗತ್, ಕಾಳಮಾಡ ಬೇಬಿ, ಮತೀನ್‌ಇತರರು ಹಾಜರಿದ್ದರು.