ವಿರಾಜಪೇಟೆ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಗೀತ ಗಾಯನ ಕಾರ್ಯಕ್ರಮದಲ್ಲಿ ಮಕ್ಕಳು ದೇಶಭಕ್ತಿ ಗೀತೆ ಹಾಡಿದರು.
ವಿರಾಜಪೇಟೆ: ಪಟ್ಟಣದ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಇತ್ತೀಚೆಗೆ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲಾ ಆಡಳಿತ ಮಂಡಳಿ ಸದಸ್ಯರಾದ ಜಯಕುಮಾರಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ದೇಶಭಕ್ತಿ ಗೀತೆಗಳು ಹಾಗೂ ನೃತ್ಯಗಳನ್ನು ಆಯೋಜಿಸಿರುವುದು ಮಕ್ಕಳಲ್ಲಿ ದೇಶದ ಬಗ್ಗೆ ಅಭಿಮಾನ ಮತ್ತು ಭಕ್ತಿ ಮೂಡಿಸಲು ಸಹಕಾರಿಯಾಗುತ್ತದೆ. ಮಕ್ಕಳು ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ ಎಂದು ಕಿವಿಮಾತು ಹೇಳಿದರು.
ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರ ಶೈಲಾ, ಪ್ರತಿಮಾ ಆಚಾರ್ಯ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.