ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಬಸವಣ್ಣ ಜಯಂತಿ ನಡೆಯಿತು. ಕೃಷ್ಣಮೂರ್ತಿ, ಪ್ರಹ್ಲಾದ್, ಮೋಹನ್ ಇದ್ದರು.
ಸೋಮವಾರಪೇಟೆ: ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಕಾರ್ಯಕ್ರಮ ನಡೆಯಿತು.
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಬಸವಣ್ಣ ಅವರ ತತ್ವಾದರ್ಶಗಳು ಸಾರ್ವಕಾಲಿಕ ಶ್ರೇಷ್ಠವಾಗಿವೆ ಎಂದು ಬಣ್ಣಿಸಿದರು. ಸಮಾಜದಲ್ಲಿದ್ದ ಅಸಮಾನತೆ, ಅಂಧಕಾರ, ಮೌಢ್ಯಗಳ ವಿರುದ್ಧ ತಮ್ಮ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವಣ್ಣನವರು ತಮ್ಮ ಜೀವನದುದ್ದಕ್ಕೂ ಸಮಾಜದ ಬದಲಾವಣೆಗೆ ಶ್ರಮಿಸಿದರು. ಸಮಾಜದಲ್ಲಿ ಸಮಾನತೆಗಾಗಿ ಶ್ರಮಿಸಿದ ಇಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಎಲ್ಲರಿಗೂ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕ ಪ್ರಹ್ಲಾದ್, ಸಿಬ್ಬಂದಿ ಮೋಹನ್, ಗ್ರಾಮ ಲೆಕ್ಕಾಧಿಕಾರಿಗಳು, ಸಾರ್ವಜನಿಕರು ಇದ್ದರು. ನಂತರ ಕಕ್ಕೆಹೊಳೆ ಜಂಕ್ಷನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.