ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು. 
ಕೊಡಗು

ವಾರ್ಷಿಕ ಸಭೆಯಲ್ಲಿ ಸಂಘದ ಅಭಿವೃದ್ಧಿ ಚರ್ಚೆ

ಸೋಮವಾರಪೇಟೆ: ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಸ್ಥಳೀಯ ಕೊಡವ ಸಮಾಜ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಬಾಲಕೃಷ್ಣ ಪೂಜಾರಿ ವಹಿಸಿದ್ದರು. ಸಭೆಯಲ್ಲಿ ಸಂಘದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. ಕಾರು ನಿಲ್ದಾಣ, ವರ್ಕ್‌ಶಾಪ್ ಏರಿಯಾ ಹಾಗೂ ಟ್ರಾೃಕ್ಟರ್ ಸ್ಟ್ಯಾಂಡ್ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. 2027ಕ್ಕೆ ಸಂಘ ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳ್ಳುತ್ತಿದ್ದು, ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ನಡೆಸುವಂತೆ ತೀರ್ಮಾನಿಸಲಾಯಿತು.
ನೂತನ ಸಾಲಿಗೆ ಆಡಳಿತ ಮಂಡಳಿ ರಚಿಸುವ ಬಗ್ಗೆ ಚರ್ಚೆ ನಡೆದು, ಕಳೆದ ಅವಧಿಯಲ್ಲಿ ಸಂಘದ ಕೆಲಸ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವಂತೆ ಸಭೆ ತೀರ್ಮಾನಿಸಿತು.
ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯರ್ಶಿ ಮಣಿ ಕುಶಾಲಪ್ಪ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ರಂಗಸ್ವಾಮಿ, ಖಜಾಂಚಿ ಡ್ಯಾನಿ ಡೊಮಿನಿಕ್, ಸಹಕಾರ್ಯದರ್ಶಿ ಎಂ.ಎಂ.ಕಿರಣ್, ಪದಾಧಿಕಾರಿಗಳಾದ ಎಸ್.ಎಂ.ಕೃಷ್ಣ, ಗೌರವಾಧ್ಯಕ್ಷ ಕೆ.ಜಿ. ಸುರೇಶ್, ಟಿ.ಕೆ.ರಮೇಶ್, ಎ.ಪಿ.ವೀರರಾಜು, ವಿನ್ಸಿ ಡಿಸೋಜ ಹಾಜರಿದ್ದರು.