ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶತಕಂಠ ಗಾಯನ ಕಾರ್ಯಕ್ರಮದಲ್ಲಿ ಗೀತಾಗಾಯನ ಮಾಡಿದ ಗಾಯಕಿಯರು. ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ , ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಇತರರು ಇದ್ದರು.
ಸೋಮವಾರಪೇಟೆ : ಕೊಡಗು ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮಹಿಳಾ ಸಮಾಜ ಭವನದಲ್ಲಿ ಶತಕಂಠದಲ್ಲಿ ಗೀತಾ ಗಾಯನ ಕಾರ್ಯಕ್ರಮ ಶುಕ್ರವಾರ ಸಂಭ್ರಮದಿಂದ ಜರುಗಿತು.
150 ವರ್ಷ ಪೂರೈಸಿದ ಬಕಿಂಚಂದ್ರ ಚಟರ್ಜಿ ರಚಿಸಿರುವ ವಂದೇ ಮಾತರಂನೊಂದಿಗೆ 100 ವರ್ಷ ಪೂರೈಸಿದ ಹುಯಿಲುಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ರಚನೆಯ ಜಯ ಭಾರತ ಜನನಿಯ ತನುಜಾತೆ ಗೀತೆಗಳಿಗೆ ಶತಕಂಠ ಗಾಯನದ ಮೂಲಕ ಗೌರವ ಸಲ್ಲಿಸಲಾಯಿತು.
ರಾಷ್ಟ್ರಭಕ್ತಿ, ಭಾಷಾ ಭಾವನೆ, ಮತ್ತು ಸಾಹಿತ್ಯ ಮೌಲ್ಯಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ವಿಶೇಷ ಗಾಯನ ಕಾರ್ಯಕ್ರಮ ಗಾಯಕಿಯರು, ಸಾಹಿತ್ಯಾಸಕ್ತರು ಮತ್ತು ಸಂಗೀತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ವಹಿಸಿದ್ದರು. ಬಳಗದ ತಾಲೂಕು ಅಧ್ಯಕ್ಷ ಎಚ್.ಜೆ.ಜವರ, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಕೋಶಾಧ್ಯಕ್ಷ ಎಸ್.ಎ.ಮುರಳೀಧರ್ ಮತ್ತು ವಿವಿಧ ಸಂಘಸಂಸ್ಥೆಗಳ ಪ್ರಮುಖರು ಇದ್ದರು.