ಚೆನ್ನಯ್ಯನ ಕೋಟೆ ಪೊಲೀಸ್ ಉಪ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಕೊಡಗು

ಜಿಲ್ಲೆಯ ಉಪ ಠಾಣೆಗಳಿಗೆ ಎಸ್ಪಿ ಭೇಟಿ, ಪರಿಶೀಲನೆ

ಸಿದ್ದಾಪುರ: ಕೊಡಗು ಜಿಲ್ಲೆಯ ಅಮ್ಮತ್ತಿ, ಪಾಲಿಬೆಟ್ಟ ಹಾಗೂ ಚೆನ್ನಯ್ಯನ ಕೋಟೆ ಪೊಲೀಸ್ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಭೇಟಿ ನೀಡಿ ಉಪ ಠಾಣೆಗಳ ಕಾರ್ಯಚಟುವಟಿಕೆಗಳನ್ನು ಗುರುವಾರ ಪರಿಶೀಲಿಸಿದರು.
ಈ ಸಂದರ್ಭ ಉಪ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವಿಕೆ, ಸಾರ್ವಜನಿಕರೊಂದಿಗೆ ಸ್ನೇಹಪೂರ್ಣ ಸಂಪರ್ಕ, ಪ್ರಕರಣಗಳ ತ್ವರಿತ ತನಿಖೆ ಹಾಗೂ ಬೀಟ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಗತ್ಯ ಸೂಚನೆಗಳನ್ನು ಸಿಬ್ಬಂದಿಗೆ ನೀಡಿದರು.
ಅಲ್ಲದೆ, ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದು, ಸಂಚಾರಿ ವ್ಯವಸ್ಥೆ ಸುಧಾರಣೆ, ಅಪರಾಧಿಗಳ ಮೇಲೆ ನಿಗಾ ವಹಿಸುವುದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಎಸ್‌ಪಿ ಬಿಂದುಮಣಿ ಅವರು ಪೊಲೀಸ್ ಸಿಬ್ಬಂದಿಗೆ ನಿರ್ದೇಶನ ನೀಡಿದರು.