ಸೋಮವಾರಪೇಟೆ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 
ಕೊಡಗು

ನಾಗದೇವರಿಗೆ ವಿಶೇಷ ಪೂಜೆ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ನಾಗದೇವರಿಗೆ ವಿಶೇಷ ಪೂಜೆ
ಸೋಮವಾರಪೇಟೆ: ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಬುಧವಾರ ಚಂಪಾ ಷಷ್ಠಿಯ ಅಂಗವಾಗಿ ನಾಗದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ದೇವಾಲಯದ ಅರ್ಚಕ ಮಣಿಕಂಠನ್ ನಂಬೂದರಿ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಾಗದೇವರಿಗೆ ಹಾಲಿನ ಅಭಿಷೇಕ, ಎಳನೀರು ಅಭಿಷೇಕ, ಅರಿಶಿನ ಅಭಿಷೇಕ, ಪುಷ್ಪಾರ್ಚನೆ ಮಾಡಲಾಯಿತು. ನಂತರ ಮಹಾಮಂಗಳಾರತಿಯೊಂದಿಗೆ ಪೂಜೆಯು ಸಂಪನ್ನಗೊಂಡಿತು. ದೇವಾಲಯದ ಅಧ್ಯಕ್ಷ ವಿನೋದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ ನಾಯರ್, ಉಪಾಧ್ಯಕ್ಷ ರಾಜೇಂದ್ರನ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಈ ಸಂದರ್ಭ ಇದ್ದರು.
ಸೋಮವಾರಪೇಟೆ ತಾಲೂಕಿನ ಸಿದ್ಧಲಿಂಗಪುರದ ಅರಿಶಿನಗುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥಸ್ವಾಮಿ ಹಾಗೂ ಛಯನ್ನು ಶೃದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆ ಗಣಪತಿ ಹೋಮದೊಂದಿಗೆ ಪೂಜೆಗಳು ಆರಂಭವಾಯಿತು. ಸಂಜೆ ಶ್ರೀ ಮಂಜುನಾಥಸ್ವಾಮಿ ದೇವಾಲಯದಲ್ಲಿ ರುದ್ರಾಭಿಷೇಕ, ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು. ಕ್ಷೇತ್ರದಲ್ಲಿರುವ ನವನಾಗನಾಥ ದೇವಾಲಯದಲ್ಲಿ ನಾಗದೇವರಿಗೆ ಜಲಾಭಿಷೇಕ, ಎಳನೀರುವ ಅಭಿಷೇಕ, ಹಾಲಿನ ಅಭಿಷೇಕ, ಅರಿಶಿಣ ಅಭಿಷೇಕ, ತಂಬಿಲ ಸೇವೆಗಳನ್ನು ಕ್ಷೇತ್ರದ ಪ್ರಧಾನ ಅರ್ಚಕ ಜಗದೀಶ ಉಡುಪ ಅವರು ನೆರವೇರಿಸಿದರು. ನಂತರ ನಾಗದೇವರಿಗೆ ಬೆಳ್ಳಿಯ ಬಿಂಬವನ್ನು ಸಮರ್ಪಿಸಲಾಯಿತು. ಮಹಾಮಂಗಳಾರತಿಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಅರ್ಚಕರಾದ ವಾದಿರಾಜ್ ಭಟ್, ದೇವಾಲಯ ಸಮಿತಿ ಅಧ್ಯಕ್ಷ ಮೋಹನ್, ಮಣಿಸ್ವಾಮಿ ಇದ್ದರು.
ಸೋಮವಾರಪೇಟೆ ಸಿದ್ಧಲಿಂಗಪುರದ ಅರಿಶಿನಗುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥಸ್ವಾಮಿ ಹಾಗೂ ನವನಾಗನಾಥಸ್ವಾಮಿ ದೇವಾಲಯದಲ್ಲಿ ಚಂಪಾ ಷಷ್ಠಿಯನ್ನು ಭಕ್ತರು ಶೃದ್ಧಾಭಕ್ತಿಯಿಂದ ಆಚರಿಸಿದರು.