ಮೇಕೇರಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಇಸ್ಮಾಯಿಲ್, ತೆನ್ನಿರ ಮೈನಾ ಇತರರಿದ್ದರು.
ಮಡಿಕೇರಿ: ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಹೆಚ್ಚಿಸುವ ಕ್ರೀಡಾಕೂಟಗಳಿಗೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.
ಮೇಕೇರಿಯ ಎಂ.ಕೆ.ಕ್ರಿಕೆಟರ್ಸ್ ಮೇಕೇರಿಯ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 6ನೇ ವರ್ಷದ ಮೇಕೇರಿ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಅಂತಿಮ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಗ್ರಾಮೀಣ ಕ್ರೀಡಾಕೂಟಗಳು ಯುವಜನತೆಯಲ್ಲಿ ಹೊಸ ಚೈತನ್ಯವನ್ನು ತುಂಬುತ್ತವೆ. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಈ ರೀತಿಯ ಕ್ರೀಡಾಕೂಟಗಳಿಗೆ ನಾನು ಸದಾ ಪ್ರೋತ್ಸಾಹ ನೀಡುತ್ತೇನೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಗ್ರಾಮೀಣ ಕ್ರೀಡೆಗಳು ಯುವ ಸಮೂಹವನ್ನು ಉತ್ತಮ ವ್ಯಕ್ತಿತ್ವದ ಹಾದಿಯತ್ತ ಕೊಂಡೊಯ್ಯುತ್ತವೆ. ಇಂತಹ ಕ್ರೀಡಾಕೂಟಗಳಿಗೆ ಮತ್ತು ಕ್ರೀಡಾ ಪ್ರತಿಭೆಗಳಿಗೆ ಸ್ಥಳೀಯ ಶಾಸಕ ಪೊನ್ನಣ್ಣ ಅವರು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಮೇಕೇರಿ ಗ್ರಾಪಂ ಸದಸ್ಯ ಎಂ.ಯು.ಹನೀಫ್, ಪಿಡಿಒ ಸಿ.ಬಿ.ಮಮತಾ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪಕ್ಷದ ಮಡಿಕೇರಿ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಮುಖರಾದ ತೋರೆರ ಉದಯ, ಮಂದ್ರಿರ ನಾಗೇಶ್, ರಾಘವ, ಎಂ.ಯು.ರಫೀಕ್, ಎಚ್.ಸಿ.ಪೊನ್ನಪ್ಪ, ಡ್ಯಾನಿ, ಪುನೀತ್, ಧನುರೈ, ಅಶ್ರಫ್, ಸಾಕಿಬ್, ಹೀಮೇಶ್, ಪಿಯೂಷ್ ಪೆರೆರಾ, ಚೆಟ್ಟೋಳಿರ ಪ್ರಕಾಶ್, ಕಾರ್ಯಕ್ರಮದ ಆಯೋಜಕರು ಮತ್ತಿತರರು ಉಪಸ್ಥಿತರಿದ್ದರು.