ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕದ ಕ್ರೀಡಾಕೂಟಕ್ಕೆ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಿದರು. ವೇದಾಜಯರಾಜು, ಜೋತಿ, ಎನ್.ಎಂ.ರಾಜೇಶ್ ಇತರರು ಇದ್ದರು. 
ಕೊಡಗು

ಸಮುದಾಯ ಸಂಘಟನೆಗೆ ಕ್ರೀಡೆ ಸಹಕಾರಿ

ವಿರಾಜಪೇಟೆ : ಕ್ರೀಡೆಯಿಂದ ದೈಹಿಕ ದೃಢತೆ, ಮನೋಉಲ್ಲಾಸದ ಜತೆಗೆ ಸಮಾಜ ಬಾಂಧವರನ್ನು ಒಗ್ಗೂಡಿಸಲು ಸಹಕಾರಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಸಮಾಜದ ಗೌರವ ಅಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕದಿಂದ ಸಮೀಪದ ಅರಮೇರಿ ಕಳಂಚೇರಿ ಮಠದ ಎಸ್‌ಎಂಎಸ್ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2026ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡದ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡುವುದು ಬಹಳಷ್ಟಿದೆ. ಜೀವನದಲ್ಲಿ ಸಾಧನೆಯ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು. ಇದಕ್ಕೂ ಮೊದಲು ವೀರಶೈವ ಸಮಾಜ ಬಾಂಧವರಿಂದ ಶ್ರೀ ಮಠದ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಎನ್.ಎಂ.ರಾಜೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕ್ರಿಕೆಟ್, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಹಗ್ಗಜಗ್ಗಾಟ, ಬಾಲಕ ಮತ್ತು ಬಾಲಕಿಯರಿಗೆ 100 ಮೀ. ಓಟ, ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, ಮಹಿಳೆಯರಿಗೆ ನಿಂಬೆಹಣ್ಣಿನ ಓಟ ಮತ್ತು ನಡಿಗೆಯಲ್ಲಿ ಸೂಜಿಗೆ ದಾರ ಪೋಣಿಸುವುದು, ಮಡಿಕೆ ಒಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾ ಕೂಟದ ತೀರ್ಪುಗಾರರಾಗಿ ವೀರಶೈವ ಸಮಾಜದ ಕಾರ್ಯದರ್ಶಿ ವೇದಾಜಯರಾಜು, ಶಿಕ್ಷಕಿ ಜ್ಯೋತಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ವೀರಶೈವ ಸಮಾಜದ ಬಾಂಧವರು ಭಾಗವಹಿಸಿದ್ದರು.
ನಂತರ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡಾ ಕೂಟದಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.