Shree Shivakumar Swamiji 
ಕೊಡಗು

ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ಇಂದು

ಶನಿವಾರಸಂತೆ: ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಏ.3ರಂದು ಶನಿವಾರಸಂತೆ ಶ್ರೀ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಕ್ಕನ ಜಯಂತಿ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತ್ಯುತ್ಸವವನ್ನು ಆಚರಿಸಲಾಗುತ್ತದೆ.
ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಅರಮೇರಿ ಕಳಂಚೇರಿ ಮಠಾದೀಶ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಅಮ್ಮತಿ ಕನ್ನಡ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಇತರ ಮಠಾಧೀಶರ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ವಿ.ಕಾಶಪ್ಪನವರ ಉದ್ಘಾಟಿಸಲಿದ್ದಾರೆ.
ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮಹಾಸಭಾ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ದೀಪಿಕಾ ಕರುಣ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಮಹಾಸಭಾ ಮಹಿಳಾ ವಿಭಾಗದ ಉಪಾಧ್ಯಕ್ಷೆ ಮತ್ತು ಕೊಡಗು ಉಸ್ತುವಾರಿ ರಾಜೇಶ್ವರಿ ನಾಗರಾಜ್, ನಿರ್ದೇಶಕಿ ಅನುರಾಧ ಚಂದ್ರಶೇಖರ್, ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ, ಮಹಾಸಭಾ ಪ್ರಮುಖರಾದ ಎಸ್.ಎಸ್.ಸುರೇಶ್, ಪ್ರವೀಣ್, ಶಾಂಬಶಿವಯ್ಯ, ಉದಯ್‌ಕುಮಾರ್, ಮೋಕ್ಷಿತ್‌ರಾಜ್, ಡಿ.ಬಿ.ಧರ್ಮಪ್ಪ, ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಮಹಾಸಭಾ ವಿವಿಧ ವಿಭಾಗದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.