ಸೋಮವಾರಪೇಟೆ ತಾಲೂಕು ಹೋಂ ಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ತ್ರೈಮಾಸಿಕ ಸಭೆಯಲ್ಲಿ ನಿತಿನ್ ಚಕ್ಕಿ ಮಾತನಾಡಿದರು. ರೋಹಿತ್, ಅಭಿನಂದನ್, ಯೋಗೇಶ್ ಇದ್ದರು.
ಸೋಮವಾರಪೇಟೆ: ತಾಲೂಕು ಹೋಂ ಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ತ್ರೈಮಾಸಿಕ ಸಭೆ ಅಧ್ಯಕ್ಷ ಸಿ.ಕೆ. ರೋಹಿತ್ ಅವರ ಅಧ್ಯಕ್ಷತೆಯಲ್ಲಿ ಸಮೀಪದ ಕಾರೆಕೊಪ್ಪದ ಖಾಸಗಿ ರೆಸಾರ್ಟ್‌ನಲ್ಲಿ ಈಚೆಗೆ ನಡೆಯಿತು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಕೊಡಗು ಜಿಲ್ಲೆ ಪ್ರವಾಸೋದ್ಯಮಕ್ಕೆ ಉತ್ತಮ ಪರಿಸರ ಹೊಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಅತ್ಯುತ್ತಮ ಸುಧಾರಿತ ಪ್ರವಾಸಿ ಸ್ಥಳವನ್ನಾಗಿ ಮಾಡಲು ಯೋಜನೆ ರೂಪಿಸಲಾಗುವುದು. ಪ್ರತಿ ತಾಲೂಕಿನಲ್ಲೂ ಪ್ರಮುಖ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಹೋಟೆಲ್ ನಿರ್ಮಾಣ ಮಾಡಲು ಸರ್ಕಾರದಿಂದ ಶೇ.25 ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಮಡಿಕೇರಿ ಎಸ್‌ಬಿಐ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಹೇಮಂತ್ ಮಾತನಾಡಿ, ಐದು ವರ್ಷ ಹಳೆಯ ಹೋಂಸ್ಟೇ ಅಭಿವೃದ್ಧಿಪಡಿಸಲು ಎಸ್‌ಬಿಐ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಲ್ಲರೂ ಇದನ್ನು ಬಳಸಿಕೊಳ್ಳಬೇಕೆಂದರು.
ಹೋಂ ಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದನ್, ಖಜಾಂಜಿ ಡಿ.ಪಿ. ಪ್ರೀತಂ ಇದ್ದರು.