ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಲ್ಲಿ ಏರ್ಪಡಿಸಲಾಗಿರುವ ಕೌಶಲ್ಯ ತರಬೇತಿ ಕಾರ್ಯಗಾರಕ್ಕೆ ಗಣ್ಯರು ಚಾಲನೆ ನೀಡಿದರು. ಪ್ರೊ. ಜೋಸ್ಲಿ ಟಿ ಲೋಬೊ, ಬೊಳ್ಳಜಿರ ಬಿ. ಅಯ್ಯಪ್ಪ, ಪೋ. ತಿಪ್ಪೆಸ್ವಾಮಿ,ನಯನ ಕಶ್ಯಪ್ ಇದ್ದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇಂಗ್ಲೀಷ್ ವಿಭಾಗ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಎರಡು ದಿನಗಳ ಕೌಶಲ್ಯ ತರಬೇತಿ ಕಾರ್ಯಗಾರಕ್ಕೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನಿವೃತ ಡಿನ್ ಪ್ರೊ. ಜೋಸ್ಲಿ ಟಿ ಲೋಬೊ ವಿದ್ಯಾರ್ಥಿಗಳಿಗೆ ಬಿಯಾಂಡ್ ಬುಕ್ಸ್, ಸ್ಕಿಲ್ ಫಾರ್ ದಿ ರಿಯಲ್ ವರ್ಡ್ ವಿಷಯದ ಕುರಿತು ಕಾರ್ಯಗಾರ ನಡೆಸಿಕೊಟ್ಟರು. ಈ ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಆಯೋಜಿಸಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕಾರ್ಯಗಳು ಬಹಳ ಅವಶ್ಯಕವಾಗಿದೆ. ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದಿಂದ ಕೌಶಲ್ಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಇದು ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಪೋ. ತಿಪ್ಪೆಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ನಯನ ಕಶ್ಯಪ್, ಉಪನ್ಯಾಸಕರಾದ ಪೂಣಚ್ಚ, ಹಳೇ ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಚೀಯಕಪೂವಂಡ ಸಚಿನ್ ಪೂವಯ್ಯ, ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.