ಕೃಷಿಯಾಧಿಕಾರಿ ಹರೀಶ್ ಕುಮಾರ್ ಮಾತನಾಡುತ್ತಿರುವುದು.3:ಹೊಸಕೋಟೆ ವ್ಯಾಪ್ತಿಯ ಕೃಷಿಕರು ಕೃಷಿ ನೀರಾವರಿ ಮತ್ತು ಮಣ್ಣು ಪರೀಕ್ಷೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವುದು.
ಸುಂಟಿಕೊಪ್ಪ: ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು.
7ನೇ ಹೊಸಕೋಟೆ ಕಲ್ಲುಕೋರೆ ಸಮುದಾಯ ಭವನದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸೋಮವಾರಪೇಟೆ ತಾಲೂಕು ಹಾಗೂ ಗುಡ್ಡೆಹೊಸೂರು ವಲಯ ಕೃಷಿ ನೀರಾವರಿ ಮತ್ತು ಮಣ್ಣು ಪರೀಕ್ಷೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಮೇಶ್ ಮಾತನಾಡಿ, ಸಂಸ್ಥೆ ಕೃಷಿಕರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಕೃಷಿಕರಿಗೆ ರಿಯಾಯಿತಿ ದರದಲ್ಲಿ ನೀಡುತ್ತಿದೆ. ಅದನ್ನು ಪಡೆದುಕೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಅಭಿವೃದ್ಧಿ ಕಾಣುವಂತೆ ಸಲಹೆ ನೀಡಿದರು.
ಅಧ್ಯಕ್ಷತೆಯನ್ನು ಕೊಡಗರಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿರತ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ಬಾಸ್, ಒಕ್ಕೂಟದ ಸಹ ಕಾರ್ಯದರ್ಶಿ ಶಾಂತ, ವಲಯ ಮೇಲ್ವಿಚಾರಕ ಯತೀಶ್, ಕೃಷಿ ಮೇಲ್ವಿಚಾರಕ ಹರಿಶ್ ಕುಮಾರ್, ಸೇವಾಪ್ರತಿನಿಧಿ ನಿರ್ಮಲಾ ಪ್ರಕಾಶ್, ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಕೃಷಿಕರು ಭಾಗವಹಿಸಿದ್ದರು.