:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಪ್ರತಿನಿಧಿಗಳು ಸದಸ್ಯರು ಸರಕಾರಿ ಪ್ರೌಢಶಾಲೆ ಆವರಣವನ್ನು ಸ್ವಚ್ಛಗೊಳಿಸಿದರು.
ಸುಂಟಿಕೊಪ್ಪ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಮಂಜಿಕೆರೆ ಸರ್ಕಾರಿ ಪ್ರೌಢಶಾಲೆ ಆವರಣ ಸೇರಿದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಭಾನುವಾರ ಕಡಿದು ಸ್ವಚ್ಛಗೊಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾರ್ಷಿಕ ಕಾರ್ಯಕ್ರಮಗಳಲ್ಲಿ ಒಂದಾದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಮಂಜಿಕೆರೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಮುಖ್ಯಶಿಕ್ಷಕ ಮೂರ್ತಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಾನ್‌ಬೈಲ್ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಸದಸ್ಯರು ವೈಯಕ್ತಿಕ ಅಭಿವೃದ್ಧಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿಕ್ಷಣ ಕೇಂದ್ರಗಳ ಸಮಸ್ಯೆಗಳಲ್ಲಿರುವ ಕುಂದು ಕೊರತೆಗಳನ್ನು ಅರಿತು ಅವನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ಸಂಸ್ಥೆ ವತಿಯಿಂದ ನಿಭಾಯಿಸುತ್ತಿದೆ. ಸ್ವಸಹಾಯ ಸಂಘದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಶಿಕ್ಷಣ ಸಂಸ್ಥೆಗಳ ಪಾವಿತ್ರೃ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವುದು ಆಶಾದಾಯಕ ವಿಚಾರ ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳಾದ ಭೂಮಿಕಾ, ಭಗವತಿ, ಕನ್ನಿಕಾ, ಶ್ರೀನಿಧಿ ಸ್ವಸಹಾಯ ಸಂಘಗಳ ಪ್ರಂಬಧಕರು ಹಾಗೂ ಸಂಘದ ಸದಸ್ಯರು ಆವರಣದಲ್ಲಿ ಬೆಳೆದಿದ ಕಾಡು ಗಿಡಗಂಟಿ, ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಪೂರ್ಣಿಮಾ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ, ಗ್ರಾಮಸ್ಥ ಬಶೀರ್, ಶಿಕ್ಷಕಿ ಮಾಲಾ, ಸೇವಾ ಪ್ರತಿನಿಧಿ ಯಶೋದಾ, ಸ್ವಸಹಾಯ ಸಂಘದ ಸದಸ್ಯರು ಇದ್ದರು.