ಕುಶಾಲನಗರ ತಾಲೂಕು ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ವತಿಯಿಂದ ಆಚರಿಸಲಾದ ಮಕ್ಕಳ ದಿನ ಕಾರ್ಯಕ್ರಮದಲ್ಲಿ ವಿವಿಧ ವೇಷಭೂಷಣ ಧರಿಸಿ ಗಮನ ಸೆಳೆದರು. ಟಿ.ಜಿ ಪ್ರೇಮಕುಮಾರ್, ಕೆ.ಕೆ. ಹರೀಶ್, ಎಂ.ಟಿ. ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯಾ ಮತ್ತಿತರರು ಇದ್ದರು.
- ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ
ಕುಶಾಲನಗರ:ಕುಶಾಲನಗರ ತಾಲೂಕು ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ವತಿಯಿಂದ ಶುಕ್ರವಾರ ಮಕ್ಕಳ ದಿನ ಆಚರಿಸಲಾಯಿತು.
ಮಕ್ಕಳ ವೇಷಭೂಷಣ, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಗಮನ ಸೆಳೆದರು. ಸಂಭ್ರಮದಿಂದ ತಮ್ಮ ಪ್ರತಿಭೆ ಅನಾವರಣಗೊಳಿಸಿ ಖುಷಿ ಪಟ್ಟರು. ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಕುರಿತು ವಿಚಾರ ಮಂಡಿಸುವ ಮೂಲಕ ಗಮನ ಸೆಳೆದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಯೋಗಕ್ಷೇಮದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮಕ್ಕಳ ಬಾಲ್ಯದ ಮನೋಭಾವ ಎತ್ತಿಹಿಡಿಯಲು ಈ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಕೆ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆಯ ಹಿರಿಯ ಶಿಕ್ಷಕ ಕೆ.ಗೋಪಾಲಕೃಷ್ಣ ಶಾಲೆಗಳಲ್ಲಿ ಸರ್ಕಾರದ ವತಿಯಿಂದ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಕಚೇರಿ ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕರಾದ ಮಾಳವಿಕಾ, ಶಾಹಿರ್, ದಿಶಾ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು.
ಇದಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ. ಸೌಮ್ಯಾ ವಿವಿಧ ಮನರಂಜನೆಯ ಆಟಗಳನ್ನು ಆಡಿಸಿದರು.