ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಗ್ರಾಮದ ಸ.ನಂ.125/1 ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಧರಣಿ ನಡೆಸಿದರು. 
ಕೊಡಗು

ನಿವೇಶನಕ್ಕಾಗಿ ಮುಂದುವರಿದ ಹೋರಾಟ

ಪ್ರಮುಖ ಮುಖ್ಯಾಂಶಗಳು

  • ವಸತಿ ರಹಿತ ಕಾರ್ಮಿಕರಿಂದ ಅಹೋರಾತ್ರಿ ಧರಣಿ
ಸೋಮವಾರಪೇಟೆ: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿ ರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರವೂ ನಡೆಯಿತು.
7ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಪೈಸಾರಿ ಜಾಗದ ಪಟ್ಟಿ ಹಾಗೂ ಸರ್ಕಾರಿ ಜಾಗ ಒತ್ತುವರಿ ಬಗ್ಗೆ ಮಾಹಿತಿ ನೀಡಲು ಮಡಿಕೇರಿಗೆ ತೆರಳಿದ್ದ ತಂಡಕ್ಕೆ ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಲಭ್ಯವಿರದ ಹಿನ್ನೆಲೆಯಲ್ಲಿ ಹಿಂದಿರುಗಿದರು.
ವಸತಿ ರಹಿತರು ಉಚಿತ ನಿವೇಶನ ಕೇಳುವುದು ನಮ್ಮ ಮೂಲಭೂತಹಕ್ಕು. ಸಂವಿಧಾನ ಕೊಟ್ಟ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಾರದು. ಸರ್ಕಾರಿ ಜಾಗವನ್ನು ಕಾನೂನುಬಾಹಿರವಾಗಿ ಒತ್ತುವರಿಯಾಗಿರುವುದು ಜಿಲ್ಲಾಡಳಿತಕ್ಕೂ ಗೊತ್ತಿದೆ. ಒತ್ತುವರಿ ಜಾಗವನ್ನು ತೆರವುಗೊಳಿಸಿ, ಅದನ್ನೇ ನಿವೇಶನ ರಹಿತರಿಗೆ ನೀಡುವುದು ಜಿಲ್ಲಾಡಳಿತ ಮುಂದಾಗಬೇಕು ಎಂದು ಮೊಣ್ಣಪ್ಪ ಒತ್ತಾಯಿಸಿದರು.