ಶತಮಾನದಷ್ಟು ಹಳೆಯ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಸ್ವಾತಿ, ಗ್ರಾಮಸ್ಥರು, ಶಾಲೆಯ ಹಳೇ ವಿದ್ಯಾರ್ಥಿಗಳು ಇದ್ದರು.
ಶತಮಾನದಷ್ಟು ಹಳೆಯ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಶಿರಂಗಾಲ ಶಾಲೆಗೆ ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಈ ಸಂದರ್ಭ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಸ್ವಾತಿ ಗ್ರಾಮ ಪಂಚಾಯಿತಿಗೆ ಒಂದರAತೆ ರಾಜ್ಯದಲ್ಲಿ 6 ಸಾವಿರ ಕೆಪಿಎಸ್ ಶಾಲೆ ತೆರೆಯುವ ಗುರಿಯನ್ನು ಸರ್ಕಾರ ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳೆಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಆಯ್ದುಕೊಂಡು, 235 ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಟ್ಟಿ ಮಾಡಲಾಗಿದೆ. ಶಿರಂಗಾಲ ಶಾಲೆಗೆ ತೊರೆನೂರು ಶಾಲೆಯನ್ನು ವಿಲೀನಗೊಳಿಸಲು ಆದೇಶಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ. ಪೋಷಕರು ತಮ್ಮ ಮಕ್ಕಳನ್ನು ಸÀರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ ಎಂದು ಬೊಬ್ಬಿರಿಯುವ ಸರ್ಕಾರ, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮೊದಲು ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಗ್ರಾಮೀಣ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಮುಖಾಂತರ ಸರ್ಕಾರ ಬಡ ಕೂಲಿ ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ದೂರ ಮಾಡಲು ಮುಂದಾಗಿದೆ. ಸಾರ್ವಜನಿಕ ಶಿಕ್ಷಣವನ್ನು ಸಂಪೂರ್ಣ ಖಾಸಗೀಕರಣ ಮಾಡಲು ಹೊರಟಿದೆ ಎಂದರು.
106 ವರ್ಷಗಳಷ್ಟು ಹಳೆಯ ಊರಿನ ಶಾಲೆಯನ್ನು ಉಳಿಸಬೇಕು ಎಂಬ ಹಂಬಲದಿAದ ಹಿರಿಯರು, ಹಳೆಯ ವಿದ್ಯಾರ್ಥಿಗಳು, ಯುವಕರು ಒಳಗೊಂಡAತೆ 70ಕ್ಕೂ ಹೆಚ್ಚು ಗ್ರಾಮಸ್ಥರು ಶಾಲೆ ಬಳಿ ಸೇರಿ ಒಕ್ಕೊರಲಿನಿಂದ ನಮ್ಮೂರಿನ ಸರ್ಕಾರಿ ಶಾಲೆಯನ್ನು ಯಾವುದೇ ಕಾರಣಕ್ಕೂ ಹುಚ್ಚಲು ಬಿಡುವುದಿಲ್ಲ, ಶಾಲೆ ಉಳಿಸಿಕೊಳ್ಳಲು ಯಾವ ಹಂತದ ಹೋರಾಟಕ್ಕಾದರೂ ನಾವು ಸಿದ್ಧ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಶಾಲೆಯ ಹಳೇ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.