ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈಶ, ಕವಿತಾ, ಸುನೀತಾ, ಸುಚಿತ್ರಾ, ಗ್ರೀಷ್ಮಾ, ಕನಕಲಕ್ಷ್ಮೀ, ಪದ್ಮಾವತಿ, ಸೀಮಾ,ಶಶಿಕುಮಾರ್, ನೇಹಾ ಇತರರಿದ್ದರು.
ಸುಂಟಿಕೊಪ್ಪ: ತನ್ನವರೊಂದಿಗೆ ಯಾವುದೇ ಸಂಘರ್ಷವಿಲ್ಲದೆ ಧರ್ಮಾತೀತ ಮತ್ತು ಜಾತ್ಯತೀತವಾಗಿ ದುಡಿಯುವವನೇ ನಿಜವಾದ ನಾಯಕ ಎಂದು ಪ್ರಾಂಶುಪಾಲೆ ಶ್ರೀಲತಾ ಹೇಳಿದರು.
2026-27 ನೇ ಸಾಲಿಗೆ ಆಯ್ಕೆಗೊಂಡ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮತ್ತು ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಅವಶ್ಯಕ ಎಂದರು.
ಕಾಲೇಜಿನ ಉನ್ನತಿ, ಪಾಲಕರ ಅಭಿಲಾಷೆ ಹಾಗೂ ಗುರುಗಳ ನಿರೀಕ್ಷೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಕಾಲೇಜಿನ ರಸಾಯನಶಾಸ್ತ್ರದ ಉಪನ್ಯಾಸಕಿ ಸರಳಾ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಈಶ, ಕವಿತಾ, ಸುನೀತಾ, ಸುಚಿತ್ರಾ, ಗ್ರೀಷ್ಮಾ, ಕನಕಲಕ್ಷ್ಮೀ, ಪದ್ಮಾವತಿ, ಸೀಮಾ, ಶಶಿಕುಮಾರ್ ಮತ್ತು ನೇಹಾ ಇದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ವಿವಿಧ ವಿನೋದ ಭರಿತ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.