ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ, ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಇವರ ಸಯುಕ್ತ ಆಶ್ರಯದಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕೊಡಗಿನ ಕ್ರೀಡಾಪಟುಗಳು.
- ರಾಜ್ಯ ಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ
ನಾಪೋಕ್ಲು: ಕೊಡಗಿನ ಮಹಿಳಾ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್‌ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಸಯುಕ್ತ ಆಶ್ರಯದಲ್ಲಿ ಈಚೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಕೊಡಗಿನ ಮಹಿಳಾ ತಂಡ ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನಂಗಾಲ ಬಿಟ್ಟಂಗಾಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮಾ ಭಾರದ ಗುಂಡು ಎಸೆತ, ತಟ್ಟೆ ಎಸೆತ, ಭರ್ಜಿ ಎಸೆತ ಹಾಗೂ ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆತ ಹಾಗೂ ಭರ್ಜಿ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಟಿ.ಶೆಟ್ಟಿಗೇರಿ ಪೆಮ್ಮಂಡ ಸಬಿತಾ ಕುಶಾಲಪ್ಪ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ (ಪ್ರ), ಗುಂಡು ಎಸೆತ ಸ್ಪರ್ಧೆ, ಭರ್ಜಿ ಎಸೆತದಲ್ಲಿ (ದ್ವಿ) ಸ್ಥಾನ ಗಳಿಸಿದ್ದಾರೆ.
ಐಮೂಡಿಯಂಡ ಶೈಲಾ ಕುಶಾಲನಗರ 100 ಮೀಟರ್ ಓಟದ ಸ್ಪರ್ಧೆಯಲ್ಲಿ (ಪ್ರ)ಸ್ಥಾನ, 1500 ಮೀಟರ್ ಓಟದ ಸ್ಪರ್ಧೆ, ಉದ್ದ ಜಿಗಿತದಲ್ಲಿ (ಪ್ರ) ಸ್ಥಾನ ಗಳಿಸಿದ್ದಾರೆ. ಪಟ್ಟಚೆರುವಂಡ ಗಗನ್ ಮೇದಪ್ಪ 200 ಮೀಟರ್ ಓಟದ ಸ್ಪರ್ಧೆ, ಉದ್ದ ಜಿಗಿತ. 100 ಮೀಟರ್ ಓಟದ ಹರ್ಡಲ್ಸ್ ರನ್ನಿಂಗ್, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕೋಮಲಾಪುರ ಗ್ರಾಮದ ಆಶಾ ಅನಂತಕುಮಾರ್ ಗುಂಡು ಎಸೆತ, ಹ್ಯಾಮರ್‌ಥ್ರೋನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಮುಳ್ಳೆರ ಪೊನ್ನಮ್ಮ ಭರ್ಜಿ ಎಸೆತ, ಗುಂಡು ಎಸೆತ, 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ತಟ್ಟೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.