ಕ್ವಾರಿ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡ ಹುಲಿಯ ಹೆಜ್ಜೆ ಗುರುತು. 
ಕೊಡಗು

ಬೀಟಿಕಾಡ್‌ಕ್ವಾರಿ ಎಸ್ಟೇಟ್ ಪ್ರದೇಶದಲ್ಲಿ ಹುಲಿ ಹೆಜ್ಜೆ ಪತ್ತೆ

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಅರಣ್ಯ ಇಲಾಖೆ ವ್ಯಾಪ್ತಿಯ ಬೀಟಿಕಾಡ್ ಹಾಗೂ ಕ್ವಾರಿ ಎಸ್ಟೇಟ್ ಪ್ರದೇಶಗಳಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೂರು ದಿನಗಳಿಂದ ಈ ಭಾಗದಲ್ಲಿ ಹುಲಿ ಸಂಚರಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಎಸ್ಟೇಟ್ ಕಾರ್ಮಿಕರು ಹಾಗೂ ಬೆಳೆಗಾರರು ಭಯದ ವಾತಾವರಣದಲ್ಲಿ ಕೆಲಸ ನಿರ್ವಹಿಸುವಂತಾಗಿದೆ. ತೋಟದ ವಿವಿಧ ಪ್ರದೇಶಗಳಲ್ಲಿ ಹುಲಿಯ ಹೆಜ್ಜೆ ಗುರುತುಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಸಂಚರಿಸುತ್ತಿದ್ದಾರೆ.
ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಹುಲಿಯನ್ನು ಸೆರೆಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಅಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿ ಸಾರ್ವಜನಿಕರಿಗೆ ಅಗತ್ಯ ಸುರಕ್ಷತಾ ಸೂಚನೆಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.