ಕೊಡವರ ಹೊಸ ವರ್ಷಾಚರಣೆ ಎಡಮ್ಯಾರ್ 1 ರ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಎನ್.ಯು. ನಾಚಪ್ಪ ಸೇರಿದಂತೆ ಸಂಘಟನೆಯ ಪ್ರಮುಖರು ಈ ಸಂದರ್ಭ ಇದ್ದರು. 
ಕೊಡಗು

ಎಡಮ್ಯಾರ್ 1ರ ಹಿನ್ನೆಲೆಯಲ್ಲಿ ಪಂಜಿನ ಮೆರವಣಿಗೆ

ಮಡಿಕೇರಿ:
ಕೊಡವರ ಹೊಸ ವರ್ಷಾಚರಣೆ ಎಡಮ್ಯಾರ್ 1 ರ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಗೋಣಿಕೊಪ್ಪಲಿನಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಈ ವೇಳೆ ಕೊಡವರ ಹಕ್ಕುಗಳನ್ನು ಪ್ರತಿಪಾದಿಸಿದರು. 32ನೇ ವರ್ಷದ ಎಡಮ್ಯಾರ್ 1 ಆಚರಿಸಿದ ಸಿಎನ್‌ಸಿ ಸಂಘಟನೆಯ ಪ್ರಮುಖರು ಹಾಗೂ ಕೊಡವ, ಕೊಡವತಿಯರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ದುಡಿಕೊಟ್ಟ್ ಪಾಟ್‌ನೊಂದಿಗೆ ಗೋಣಿಕೊಪ್ಪಲಿನ ಆರ್‌ಎಂಸಿ ಯಾರ್ಡ್ ಬಳಿಯಿಂದ ಮುಖ್ಯ ಬೀದಿಯಲ್ಲಿ ಪೊಂಬೊಳ್ಕ್ ಮೆರವಣಿಗೆ ನಡೆಸಿದರು. ಮಾನವ ಸರಪಳಿ ರಚಿಸಿದ ನಂತರ ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಮಂಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಎನ್.ಯು. ನಾಚಪ್ಪ ಕೊಡವರು ಪ್ರತ್ಯೇಕ ಮೂಲವಂಶಸ್ಥ ಜನಾಂಗವಾಗಿದ್ದು, ಸಂವಿಧಾನದ ಮೂಲಭೂತ ಹಕ್ಕುಗಳ 32ನೇ ವಿಧಿ ಪ್ರಕಾರ ಭಾರತ ಸರ್ಕಾರ ಸಂವಿಧಾನಿಕ ಪರಿಹಾರವಾಗಿ ಕೊಡವರ ಹಕ್ಕುಗಳನ್ನು ಮಾನ್ಯ ಮಾಡಬೇಕು. ಸಂವಿಧಾನದ ಆರ್ಟಿಕಲ್ 244 ಮತ್ತು 371 ವಿಧಿ ಮತ್ತು 6ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯದ ಹಕ್ಕು ನೀಡಬೇಕು. ಸಂವಿಧಾನದ 340 ಮತ್ತು 342ನೇ ವಿಧಿಯಡಿಯಲ್ಲಿ ವರ್ಗೀಕರಿಸಿ ಅತಿಸೂಕ್ಷö್ಮ ಕೊಡವ ಜನಾಂಗದ ರಕ್ಷಣೆಯಾಗಬೇಕು. ಸಂವಿಧಾನದ 25, 26 ರ ವಿಧಿಯಡಿ ಕೊಡವರ ಧಾರ್ಮಿಕ ಸಂಸ್ಕಾರ ತೋಕ್ -ಗನ್ ನ್ನು ಸೇರ್ಪಡೆಗೊಳಿಸಿ ದೈನಂದಿನ, ಧಾರ್ಮಿಕ ಕ್ರಿಯೆಯಾಗಿ ಕೋವಿ ಹೊಂದುವ ಹಕ್ಕನ್ನು ಆಭಾದಿತಗೊಳಿಸಬೇಕು. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು ಮತ್ತು ಆದಿಮಸಂಜಾತ ಕೊಡವ ಜನಾಂಗೀಯ ಸಮುದಾಯಕ್ಕೆ "ಪ್ರಾಚೀನ ಆದಿಮಸಂಜಾತ ಏಕಜನಾಂಗೀಯ ಬುಡಕಟ್ಟು ಕುಲ" ಎಂದು ವರ್ಗಿಕರಿಸಬೇಕು ಎಂದು ಒತ್ತಾಯಿಸಿದರು.
ಎಡಮ್ಯಾರ್ ನಮ್ಮೆ ವಸಂತ ಋತು ಫೆ.15 ರಿಂದ ಆರಂಭವಾಗಿ ಏ.14 ರಂದು ಮುಕ್ತಾಯವಾಗುವ ಹಂತವಾಗಿದೆ ಮತ್ತು ಸೂರ್ಯನು ಮೇಷ ನಕ್ಷತ್ರ ಪುಂಜಗಳತ್ತ ಸಾಗುವ ಪ್ರಕ್ರಿಯೆಯಾಗಿದೆ. ಎಲ್ಲಾ ಋತುಗಳಲ್ಲಿ ಈ ಋತು ಅತ್ಯಂತ ವರ್ಣರಂಜಿತವಾಗಿದೆ. ಕೃಷಿ ಚಟುವಟಿಕೆ ಮೂಲಕ ಪ್ರಕೃತಿಯೊಂದಿಗೆ ಬೆರೆತು ಹೋಗಿರುವ ಬುಡಕಟ್ಟು ಜನಾಂಗ ಕೊಡವರು ಕೊಡವ ಜನಾಂಗೀಯ ಪಂಚಾAಗದ ಪ್ರಕಾರ ಸೌರಮಾನ ಹೊಸ ವರ್ಷವನ್ನು ಪ್ರಕೃತಿಯ ವಾರ್ಷಿಕ ಚಕ್ರದಲ್ಲಿ ಮೊದಲ ಹಬ್ಬವೆಂದು ಪರಿಗಣಿಸುತ್ತಾರೆ. ಕೊಡವ ಬುಡಕಟ್ಟಿನ ಹೊಸ ವರ್ಷ ಎಂದರೆ ಸೌರಮಾನ ಕ್ಯಾಲೆಂಡರ್ ಮೂಲಭೂತವಾಗಿ ಎಡಮ್ಯಾರ್ 1 ಗ್ರೆಗೋರಿಯನ್ ಕ್ಯಾಲೆಂಡರ್‌ನೊAದಿಗೆ ಹೊಂದಿಕೆಯಾಗುತ್ತದೆ. ಇದು ಕೊಡವ ಬುಡಕಟ್ಟು ಜನಾಂಗದವರ ಕೃಷಿ ಚಟುವಟಿಕೆಗಳ ಆರಂಭವನ್ನು ಸೂಚಿಸುತ್ತದೆ ಎಂದರು.
ಪಟ್ಟಮಾಡ ಲಲಿತಾ ಗಣಪತಿ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ. ಪಾರ್ವತಿ, ಅರೆಯಡ ಸವಿತಾ ತಿಮ್ಮಯ್ಯ, ಬೊಟ್ಟಂಗಡ ಸವಿತಾ ಗಿರೀಶ್, ಚೋಳಪಂಡ ಜ್ಯೋತಿ ನಾಣಯ್ಯ, ಅಜ್ಜಮಾಡ ಸಾವಿತ್ರಿ, ನಂದಿನೆರವAಡ ನಿಶಾ ಅಚ್ಚಯ್ಯ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಬಾಚರಣಿಯಂಡ ಚಿಪ್ಪಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಕೊಲ್ಲೀರಾ ಗಯಾ, ಜಮ್ಮಡ ಮೋಹನ್, ಅಜ್ಜಿಕುಟ್ಟಿರ ಲೋಕೇಶ್ ಮತ್ತಿತರರು ಈ ಸಂದರ್ಭ ಇದ್ದರು.