ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ನೀಡುವ ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿಯನ್ನು ಟಿ.ಆರ್. ಶರವಣಕುಮಾರ್ ಅವರಿಗೆ ಪ್ರದಾನ ಮಾಡಲಾಯಿತು. ಡಾ. ಮಂತರ್ ಗೌಡ, ವಿ.ಪಿ. ಶಶಿಧರ್, ಕೆ.ಎನ್. ಸುರೇಶ್, ಮಂಜುನಾಥ ಗುಂಡೂರಾವ್ ಮತ್ತಿತರರು ಇದ್ದರು.
ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ವರ್ಷಂಪ್ರತಿಯAತೆ ನೀಡುವ ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿಯನ್ನು ಈ ಸಾಲಿನಲ್ಲಿ ಕುಶಾಲನಗರದ ಟಿ.ಆರ್. ಶರವಣಕುಮಾರ್ ಅವರಿಗೆ ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇðಶ ಆಗಿರುವ ಟಿ.ಆರ್. ಶರವಣಕುಮಾರ್ ಕರ್ನಾಟಕ ಸಹಕಾರ ಶಿರೋಮಣಿ 2025 ರಾಜ್ಯ ಮಟ್ಟದ ಪ್ರಶಸ್ತಿ ಕೂಡ ಪಡೆದುಕೊಂಡಿದ್ದು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿ, ಗೌರವಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ.ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಸಮಾಜ ಸೇವಕರಾದ ಹಕ್ಕೆ ಮೋಹನ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಅನಂತ, ವೆಂಕಟೇಶ್, ಶಿವನಂಜಪ್ಪ, ಸಹಕಾರ ಯೂನಿಯನ್ ಬ್ಯಾಂಕ್ ನಿರ್ದೇಶಕ ಆರ್. ಎಸ್. ಸುನಿಲ್ ರಾವ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.