ಪೊನ್ನಂಪೇಟೆ ಮಾರ್ಗವಾಗಿ ಕೇರಳಕ್ಕೆ ಹೋಗುವ ರಾಜ್ಯ ಹೆದ್ದಾರಿ 89ರಲ್ಲಿ ನಡಿಕೇರಿ ಬಳಿ ಸಮಸ್ಯೆಗೆ ಕಾರಣವಾಗಿರುವ ಮೋರಿ ಕಾಮಗಾರಿ.
ಗೋಣಿಕೊಪ್ಪಲು: ಪೊನ್ನಂಪೇಟೆ ಮಾರ್ಗವಾಗಿ ಕೇರಳಕ್ಕೆ ಹೋಗುವ ರಾಜ್ಯ ಹೆದ್ದಾರಿ 89ರಲ್ಲಿ ವಾಹನಗಳು ತಿರುಗಾಡದ ಸ್ಥಿತಿ ನಿರ್ಮಾಣ ಆಗಿದೆ.
ನಡಿಕೇರಿ ಬಳಿ ಕಳೆದ ಎರಡು ತಿಂಗಳಿಂದ ಮೋರಿ ಕಾಮಗಾರಿ ನಡೆಯುತ್ತಿದ್ದು ಅದಿನ್ನೂ ಪೂರ್ಣಗೊಳ್ಳದಿರುವುದು ಸಮಸ್ಯೆಯಾಗಿದೆ. ಈಗ ಮಳೆ ಬರುತ್ತಿರುವುದರಿಂದ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಸರು ಸಂಗ್ರಹವಾಗಿದ್ದು ವಾಹನಗಳು ಕೆಸರಿನಲ್ಲಿ ಹೂತುಹೋಗಿ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತಿದೆ. ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಕೂಡಲೇ ಈ ಅವ್ಯವಸ್ಥೆ ಸರಿಪಡಿಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.