ಕಡ್ಲೆರ ತುಳಸಿ ಮೋಹನ್ 
ಕೊಡಗು

ತುಳಸಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

ನಾಪೋಕ್ಲು: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಬಕ್ಕ ನಿವಾಸಿಯಾದ ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಅವರು 2026ರ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಲೆ, ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿನ ಕೊಡುಗೆಯನ್ನು ಗುರುತಿಸಿ ತುಳಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಸೋಶಿಯಲ್ ವರ್ಕರ್ಸ್ ಅಸೋಸಿಯೇಷನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಸಹಯೋಗದಲ್ಲಿ ಫೆ.8ರಂದು ಕುಂದಾಪುರದ ಸೀತಾರಾಮ ಶೆಟ್ಟಿ ಕಲಾಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಕಡ್ಲೆರ ತುಳಸಿ ಮೋಹನ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.