ಹಳೆತಾಲುಕು ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಾನಿಗಳಾದ ಚೋಂದಕ್ಕಿ ಸಮವಸ್ತ್ರ ನೀಡಿ ಸಹಕರಿಸಿದರು.  
ಕೊಡಗು

ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ

ಎಂ.ರವಿ
ನಾಪೋಕ್ಲು: ಇಲ್ಲಿನ ಹಳೇ ತಾಲುಕು ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿ ಸಹಕರಿಸಲಾಯಿತು.
ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನಡೆಸಿದ ಬಾಲವಿಕಾಸ ಸಮಿತಿ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್‌ಕೆಜಿ, ಯುಕೆಜಿ ಹಾಗೂ ಅಂಗನವಾಡಿ ಮಕ್ಕಳಿಗೆ ನಾಪೋಕ್ಲು ಗ್ರಾಮ ಪಂಚಾಯಿತಿ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಚೋಂದಕ್ಕಿ ಅವರು ಕಲರ್ಸ್ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿದ್ದರು. ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಹಾಗೂ ಮಕ್ಕಳ ಪಾಲಕರು ಬಾಲವಿಕಾಸ ಸಮಿತಿ ಸದಸ್ಯರು ಉಪಸ್ಥಿತರಿದ್ದರು.