ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪ ಬದಲಾಯಿಸಿ ಕರ್ಕಶ ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ವಾಹನವೊಂದನ್ನು ಮಡಿಕೇರಿ ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. 
ಕೊಡಗು

ಕರ್ಕಶ ಶಬ್ದ ಮಾಡುತ್ತಿದ್ದ ವಾಹನ ವಶ

ಸುನಿಲ್ ಪೊನ್ನೇಟಿ
ಮಡಿಕೇರಿ:
ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪ ಬದಲಾಯಿಸಿ, ಕರ್ಕಶ ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಮಡಿಕೇರಿ ಸಂಚಾರಿ ಪೊಲೀಸರು ಮಂಗಳವಾರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಕೆಎ 01ಎನ್‌ಜಿ 2730ರ ಜಿಪ್ಸಿ ವಾಹನ ನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ರೇಸಿಂಗ್ ಸ್ಪೀಡ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಿರುವ ಬಗ್ಗೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿದ್ದ ಸಂದರ್ಭ ಮೈತ್ರಿ ಜಂಕ್ಷನ್ ಬಳಿ ಎಫ್.ಎಂ.ಸಿ. ಕಾಲೇಜು ಕಡೆಯಿಂದ ನಗರದ ಕಡೆಗೆ ಈ ಜಿಪ್ಸಿ ಅತೀ ವೇಗವಾಗಿ ಸೈಲೆನ್ಸರ್‌ನಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಅಪಾಯಕರ ರೀತಿಯಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದುದನ್ನು ಗಮನಿಸಿ ವಾಹನ ತಡೆದು ಪರಿಶೀಲನೆ ನಡೆಸಲಾಗಿದೆ.
ಜಿಪ್ಸಿ ಮೂಲ ಸ್ವರೂಪವನ್ನು ಬದಲಾಯಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅನುಮತಿಯನ್ನು ಪಡೆದಿಲ್ಲದಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಮಡಿಕೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಯಾವುದೇ ವಾಹನಗಳ ಆರ್.ಸಿ. ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಲಾವಣೆ ಮಾಡುವುದು ಅಥವಾ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್, ಹಾರ್ನ್ಗಳನ್ನು ಅಳವಡಿಸಿಕೊಳ್ಳುವುದು, ವ್ಹೀಲಿಂಗ್ ಮಾಡಿಕೊಂಡು ಚಾಲನೆ ಮಾಡುವವರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.