ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಪೆಮ್ಮಂಡ ಕೌಶಿ ಕಾವೇರಮ್ಮ, ಕೋಡಿರ ವಿನೋದ್ ನಾಣಯ, ಬಿದ್ದಂಡ ರಾಜೇಶ್ ಅಚ್ಚಯ್ಯ ಇತರರಿದ್ದರು.
ನಾಪೋಕ್ಲು: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.
ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಪಟ್ಟಚರವಂಡ ಗಗನ್ ವೇದಪ್ಪ, ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದ ಬಿ.ಎ. ವನಜಾ, ಸಮುದಾಯದೊಂದಿಗೆ ಉತ್ತಮ ಹೊಂದಾಣಿಕೆ ಪ್ರಶಸ್ತಿ ಪಡೆದ ಡಿ.ಕೆ. ಕವಿತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ಕನಕವತಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಸನ್ಮಾನಿತರು ಮಾತನಾಡಿ, ತಮ್ಮ ಸೇವಾ ಅವಧಿಯ ನೆನಪುಗಳನ್ನು ಮೆಲುಕು ಹಾಕಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ, ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಪಿಡಿಒ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಇತರರಿದ್ದರು.