ಶಾಸಕ ಎ.ಎಸ್.ಪೊನ್ನಣ್ಣ ಮಗವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ತಹಸೀಲ್ದಾರ್ ಪ್ರವೀಣ್, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ, ಪುರಸಭೆ ಮಾಜಿ ಸದಸ್ಯ ರಾಜೇಶ್ ಪದ್ಮನಾಭ, ಮಂಜುನಾಥ್ ಇದ್ದರು.
ವಿರಾಜಪೇಟೆ: ಪೋಲಿಯೋ ಮುಕ್ತ ಭಾರತ ನಿರ್ಮಿಸುವುದು ನಮ್ಮೆಲ್ಲರ ಗುರಿಯಾಗಿದೆ. ಈ ನಿಟ್ಟಿನಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಗತ್ಯ ಎಂದು ಶಾಸಕ ಎ. ಎಸ್.ಪೊನ್ನಣ್ಣ ಹೇಳಿದರು.
ವಿರಾಜಪೇಟೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಭಾನುವಾರ ಆಯೋಜಿಸಿದ್ದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ. ನಿಗದಿಪಡಿಸಿದ ಗುರಿಯನ್ನು ಶೇ.100ರಷ್ಟು ಸಾಧಿಸುವ ಮೂಲಕ ಕ್ಷೇತ್ರವನ್ನು ಸಂಪೂರ್ಣ ಪೋಲಿಯೋ ಮುಕ್ತವನ್ನಾಗಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ಪ್ರವೀಣ್, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ರಜಿನಿಕಾಂತ್, ಅನಿತಾ, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಪೊನ್ನು, ಬಟ್ಟಕಾಳಂಡ ರಾಜ, ವರ್ಗಿಸ್, ಜಾಫರ್,ಫಾತಿಮಾ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆರೋಗ್ಯ ಸಹಾಯಕರು ಉಪಸ್ಥಿತರಿದ್ದರು.