ಪಲ್ಸ್ ಪೋಲಿಯೋ ಲಸಿಕೆಯಿಂದ ಯಾವುದೇ ಒಂದು ಮಗು ವಂಚಿತರಾಗಬಾರದು ಎನ್ನುವುದರ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಲಾಯಿತು. ಹೇಮಲತಾ, ಮೇಪಾಡಂಡ ಸವಿತಾ ಕೀರ್ತನ್ ಇತರರಿದ್ದರು. 
ಕೊಡಗು

ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ

ಮಡಿಕೇರಿ: ಪಲ್ಸ್ ಪೋಲಿಯೋ ಲಸಿಕೆಯಿಂದ ಯಾವುದೇ ಒಂದು ಮಗು ವಂಚಿತರಾಗಬಾರದು ಎನ್ನುವುದರ ಹಿನ್ನೆಲೆಯಲ್ಲಿ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೋಮವಾರದಿಂದ ಎರಡು ದಿನಗಳ ಕಾಲ ಹಳ್ಳಿಗಳಲ್ಲಿ ಮತ್ತು ಮೂರು ದಿನಗಳ ಕಾಲ ನಗರ ವ್ಯಾಪ್ತಿಯಲ್ಲಿ ಮನೆ ಮನೆಗೂ ತೆರಳಿ, ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯ ನಡೆಸಲಾಗುತ್ತಿದೆ.
ಸೋಮವಾರ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹೇಮಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಬಿಳಿಗೇರಿ, ಮೇಕೇರಿ, ಕಗ್ಗೋಡ್ಲು, ಹಾಕತ್ತೂರು, ತೊಂಬತ್ತು ಮನೆ, ಐಕೋಳ, ಕಟ್ಟೆಮಾಡು, ಪರಂಬು ಪೈಸಾರಿ ಭಾಗಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ಮರುಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಪೋಲಿಯೋ ಹನಿ ವಂಚಿತ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು.