ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿ, ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಕುಶಾಲನಗರದಲ್ಲಿ ಆಯೋಜಿಸಲಾಗಿದ್ದ ವಾಕಾಥಾನ್ ಮತ್ತು ಸೈಕಥಾನ್ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು. ಬಿ.ಆರ್. ನಾಗೇಂದ್ರ ಪ್ರಸಾದ್, ಹೆಚ್.ಟಿ. ಅನಿಲ್, ಎಸ್.ಕೆ. ಸತೀಶ್, ವಿ.ಪಿ. ಶಶಿಧರ್, ದಾವೂದ್, ಪ್ರಸನ್ನ ಭಟ್, ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಓದಲು ಹೊರಗೆ ಹೋಗುವ ಮಕ್ಕಳ ಮೇಲೆ ಪೋಷಕರು ಹೆಚ್ಚಿನ ನಿಗಾ ಇಡಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಾಸವಿ ಸಪ್ತಾಹ 2026ರ ಅಂಗವಾಗಿ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿ, ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಕುಶಾಲನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಾಕಾಥಾನ್ ಮತ್ತು ಸೈಕಥಾನ್ ಕಾರ್ಯಕ್ರಮಕ್ಕೆ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತುಗಳ ಬಳಕೆಯಿಂದ ಹದಿಹರೆಯದ ಯುವಕರು ದಾರಿ ತಪ್ಪುತ್ತಿದ್ದಾರೆ. ಮಕ್ಕಳು ಹಾಳಾಗುತ್ತಿದ್ದಾರೆ. ಕುಟುಂಬಗಳೂ ನಾಶವಾಗುತ್ತಿದೆ. ಹಾಗಾಗಿ ಕುಟುಂಬಸ್ಥರು ಎಚ್ಚೆತ್ತುಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಚಲನವನಲನಗಳನ್ನು ಗಮನಿಸುತ್ತಿರಬೇಕು. ಯುವ ಜನಾಂಗವನ್ನು ಮಾದಕ ವಸ್ತುಗಳ ಪಿಡುಗು ದಾರಿ ತಪ್ಪಿಸುತ್ತಿರುವ ಇಂದಿನ ದಿನಗಳಲ್ಲಿ ಇಂಥ ಕಾರ್ಯಕ್ರಮಗಳ ಅಗತ್ಯವಿದೆ ಎಂದರು.
ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕಿ ಡಾ. ಬಿ. ಆರ್. ಶಾಂತಲಕ್ಷ್ಮೀ ಮಾತನಾಡಿದರು.
ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಕಾರ್ಯದರ್ಶಿ ಕೆ. ಪ್ರವೀಣ್, ಖಜಾಂಚಿ ಪಿ.ಎಸ್. ಪ್ರಶಾಂತ್, ವಾಸವಿ ಸಪ್ತಾಹದ ಯೋಜನಾ ನಿರ್ದೇಶಕ ಎ.ಎಸ್. ಕುಮಾರ್, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ರೇಷ್ಮಾ ನವೀನ್, ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ್, ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್, ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸತೀಶ್ ಕಾಳೇಗೌಡ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ವಿವಿಧ ಸಂಘಟನೆಗಳ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಪ್ರಸನ್ನ ಭಟ್, ದಾವೂದ್, ಹೆಚ್.ಟಿ. ಅನಿಲ್, ಬಿ.ಜಿ. ಅನಂತಶಯನ ಮತ್ತಿತರರು ಈ ಸಂದರ್ಭ ಇದ್ದರು.
ಸರ್ಕಾರಿ ಪಾಲಿಟೆಕ್ನಿಕ್ ಬಳಿಯಿಂದ ಆರಂಭವಾದ ವಾಕಾಥಾನ್ ಮತ್ತು ಸೈಕಥಾನ್ ರಾಷ್ಟಿçÃಯ ಹೆದ್ದಾರಿ 275 ಮೂಲಕ ಸಾಗಿ ಶ್ರೀ ಗಣಪತಿ ದೇವಾಲಯ ಎದುರು ಮಾನವ ಸರಪಳಿ ರಚಿಸುವ ಮೂಲಕ ಕೊನೆಗೊಂಡಿತು.