ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಪರಿಸರ ದಿನ ಆಚರಿಸಲಾಯಿತು. ಶಶಿಕಲಾ, ಎಸ್. ಪವಿತ್ರ, ಪ್ರಕಾಶ್ ಆಚಾರ್ಯ, ಚೇತನ್ ಕೋಚನ, ಹೆಚ್. ವಿಮಲಾ ಮತ್ತಿತರರು ಇದ್ದರು.
ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಶನಿವಾರ ಪರಿಸರ ದಿನ ಆಚರಿಸಲಾಯಿತು. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆಗೆ ಕರೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ, ಮುಂದಿನ ಪೀಳಿಗೆಯ ಸುಂದರ ಭವಿಷ್ಯಕ್ಕಾಗಿ ಪರಿಸರ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.
ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಪವಿತ್ರ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಚೇತನ್ ಕೋಚನ, ನಗರಸಭೆಯ ಮಾಜಿ ಅಧ್ಯಕ್ಷೆ ಜುಲೇಕಾಬಿ, ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಸದಸ್ಯೆ ಮಿನಾಜ್ ಪ್ರವೀಣ್, ಪ್ರಾಂಶುಪಾಲರಾದ ಹೆಚ್. ವಿಮಲಾ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.