ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶುಭ, ಡಾ.ಲೋಕೇಶ್, .ಸತೀಶ್‌ಕುಮಾರ್ ಇತರರಿದ್ದರು.
- ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಅಗತ್ಯ
ಮಡಿಕೇರಿ: ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಯುವ ಸಮೂಹವು ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದೆ. ಅಂತಹ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರಬೇಕಾಗಿದೆ ಎಂದು ನುಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ಲೋಕೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಂಬಾಕು ವ್ಯಸನದಿಂದ ಸಮಾಜದ ಸ್ವಾಸ್ಯ್ಥ ಹಾಳಾಗುತ್ತಿರುವುದರಿಂದ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್ ಅವರು, ತಂಬಾಕು ಉತ್ಪನ್ನಗಳಿಂದಾಗವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್ ಅವರು ವಿಶ್ವ ತಂಬಾಕು ರಹಿತ ದಿನಾಚರಣೆಯ ಮಹತ್ವದ ಕುರಿತು ವಿವರಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮಹೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಇತರರಿದ್ದರು.
ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ಚಿತ್ರಕಲೆ ಸ್ವರ್ಧೆ, ಕ್ವಿಜ್ ಮತ್ತು ಪಿಕ್ ಎಂಡ್ ಸ್ಪೀಚ್ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಗಣ್ಯರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಹಾಗೂ ಬೋಧಕ ಆಸ್ಪತ್ರೆಯ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯ ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.