ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ನಾಪೋಕ್ಲು: ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸೋಮವಾರ ಆಚರಿಸಲಾಯಿತು.
ಶ್ರೀರಾಮ ಸಟ್ರಸ್ಟ್ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಯೋಗಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅಗತ್ಯ. ಯೋಗಾಭ್ಯಾಸದಿಂದ ಮನುಷ್ಯನ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ. ನಿರಂತರ ಯೋಗ ಪ್ರಕ್ರಿಯೆಯಿಂದ ತಾಳ್ಮೆ, ಸಹನೆ, ಸಹಾನುಭೂತಿ, ಪ್ರೀತಿ, ವಾತ್ಸಲ್ಯ ಸಹಜವಾಗಿ ಮೈಗೂಡಿಕೊಳ್ಳುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಶಾಲೆಯ ಪ್ರಾಂಶುಪಾಲೆ ಬಿ.ಎಂ.ಶಾರದಾ ಮಾತನಾಡಿ, ದೈಹಿಕ ಆರೋಗ್ಯದಲ್ಲಿ ಯೋಗಾಸನವು ಹೆಚ್ಚು ಪರಿಣಾಮ ಬೀರುತ್ತದೆ. ಭಾರತೀಯ ಪ್ರಾಚೀನ ಶಿಕ್ಷಣದಲ್ಲಿ ಒಂದಾದ ಯೋಗವನ್ನು ಇಡೀ ವಿಶ್ವವೇ ಸ್ವೀಕರಿಸಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನಾಗಿ ಆಚರಿಸುತ್ತಿದೆ. ಬದಲಾದ ಜೀವನ ಶೈಲಿಯಲ್ಲಿ ಯುವ ಪೀಳಿಗೆಗೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮದಂತಹ ನಿತ್ಯ ಅಭ್ಯಾಸ ಅತಿ ಅಗತ್ಯವಾಗಿದೆ. ಸರಳ, ಸುಖೀ ಜೀವನಕ್ಕೆ ಯೋಗ ಸಹಕಾರಿ ಎಂದರು.
ಶಾಲಾ ಇಂಟರಾಕ್ಟ್ ಕ್ಲನ್‌ನ ಖಜಾಂಚಿ ಬಿ.ಎಂ.ಸಮಿತಾ ಯೋಗ ದಿನದ ಮಹತ್ವದ ಕುರಿತು ಮಾತನಾಡಿದರು. ದೈಹಿಕಶಿಕ್ಷಣ ಶಿಕ್ಷಕಿ ಸರಿತಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಬಗೆಯ ಯೋಗಾಸನ ಭಂಗಿಗಳನ್ನು ಪ್ರದರ್ಶಿಸಿ ನೆರೆದವರ ಮೆಚ್ಚುಗೆಗೆ ಪಾತ್ರರಾದರು.